
ಬೆಳಗಾವಿ: ವಿಷಾಹಾರ ಸೇವನೆಯಿಂದಾಗಿ 22 ಪ್ರಶಿಕ್ಷಣಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಖಾನಾಪುರ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದಿದೆ.
ಪ್ರಶಿಕ್ಷಣಾರ್ಥಿಗಳು ಭಾನುವಾರ ರಾತ್ರಿ ಆಹಾರ ಸೇವನೆ ಮಾಡಿದ್ದು, ಕೆಲ ನಿಮಿಷಗಳ ಬಳಿಕ ಒಬ್ಬ ಹಿಂದ ಒಬ್ಬರಿಗೆ ವಾಂತಿ, ಅತಿಸಾರ, ಜ್ವರ ಮತ್ತು ಆಯಾಸದಂತಹ ಲಕ್ಷಣಗಳು ಕಂಡು ಬಂದಿದೆ.
ಬಳಿಕ ಸೋಮವಾರ ಬೆಳಿಗಿನ ಜಾವ ಎಲ್ಲರನ್ನೂ ಚಿಕಿತ್ಸೆಗಾಗಿ ಖಾನಾಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಯಗಿದೆ ಎಂದು ತಿಳಿದುಬಂದಿದೆ.
ಪ್ರಸ್ತುತ ಎಲ್ಲರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆಯ ಅಧಿಕಾರಿಗಳು ದೃಢಪಡಿಸಿದ್ದಾರೆ.
ಈ ನಡುವೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರು ವೈದ್ಯಕೀಯ ಸಿಬ್ಬಂದಿಯಿಂದ ವಿವರವಾದ ವರದಿಯನ್ನು ಪಡೆದುಕೊಂಡಿದ್ದು, ಸೂಕ್ತ ಯಾದ ವೈದ್ಯಕೀಯ ಆರೈಕೆಯನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
Advertisement