ಅಮುಲ್-ನಂದಿನಿ ವಿವಾದ: ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ- BMRCL

ಬೆಂಗಳೂರು ಮೆಟ್ರೊ ನಿಲ್ದಾಣಗಳ ವ್ಯಾಪ್ತಿಯಲ್ಲಿರುವ ಅಂಗಡಿಗಳು ಮತ್ತು ಮಳಿಗೆಗಳನ್ನು ಟೆಂಡರ್ ಪ್ರಕ್ರಿಯೆ ಮೂಲಕ ಹಂಚಲಾಗಿದೆ.
Amul Stalls at Metro stations
ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ
Updated on

ಬೆಂಗಳೂರು: ಬೆಂಗಳೂರು ಮೆಟ್ರೊ ನಿಲ್ದಾಣಗಳಲ್ಲಿ ಅಮುಲ್‌ಗೆ ಮಳಿಗೆ ಹಂಚಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಈ ಕುರಿತು ಪ್ರತಿಕ್ರಿಯಿಸಿದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಹಂಚಿಕೆ ಪ್ರಕ್ರಿಯೆಯಲ್ಲಿ ಯಾವುದೇ ಪಕ್ಷಪಾತ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಅಮುಲ್‌ಗೆ 10 ಮಳಿಗೆಗಳ ಹಂಚಿಕೆ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗುತ್ತಿರುವಂತೆಯೇ ಅವರು ಈ ರೀತಿ ಹೇಳಿದ್ದಾರೆ. ರಾಜ್ಯ ಸರ್ಕಾರ ನಂದಿನಿಗಿಂತಲೂ ಅಮುಲ್ ಅನ್ನು ಪ್ರಚಾರ ಮಾಡುತ್ತಿದೆ ಎಂದು ಜೆಡಿಎಸ್ ಮತ್ತು ಕನ್ನಡ ಪರ ಕಾರ್ಯಕರ್ತರು ಆರೋಪಿಸಿದ್ದಾರೆ.

ಆದರೆ ಮೆಟ್ರೋವನ್ನು ಕೇಂದ್ರ ಸರ್ಕಾರ ನಿರ್ವಹಿಸುತ್ತಿದ್ದು, ಈ ಬಗ್ಗೆ ಅವರನ್ನು ಪ್ರಶ್ನಿಸಬೇಕು ಎಂದು ರಾಜ್ಯ ಸರ್ಕಾರ ಹೇಳಿದೆ. ವಿವಾದದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಅಮುಲ್‌ಗೆ ನೀಡಿರುವ 10 ಸ್ಥಳಗಳ ಪೈಕಿ 8 ಕಡೆಗಳಲ್ಲಿ ನಂದಿನಿ ಮಳಿಗೆ ತೆರೆಯಲು ಅವಕಾಶ ನೀಡುವಂತೆ ಬಿಎಂಆರ್‌ಸಿಎಲ್‌ಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.

ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಎಂಆರ್‌ಸಿಎಲ್‌ನ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ ಚವಾಣ್, ಬೆಂಗಳೂರು ಮೆಟ್ರೊ ನಿಲ್ದಾಣಗಳ ವ್ಯಾಪ್ತಿಯಲ್ಲಿರುವ ಅಂಗಡಿಗಳು ಮತ್ತು ಮಳಿಗೆಗಳನ್ನು ಟೆಂಡರ್ ಪ್ರಕ್ರಿಯೆ ಮೂಲಕ ಹಂಚಲಾಗಿದೆ. ಈ ಪ್ರಕ್ರಿಯೆಯ ಮೂಲಕ ಅಮುಲ್ 10 ಮಳಿಗೆಗಳನ್ನು ಪಡೆದುಕೊಂಡಿದೆ ಎಂದರು.

ಭವಿಷ್ಯದ ಟೆಂಡರ್‌ಗಳಲ್ಲಿ ನಂದಿನಿ ಭಾಗವಹಿಸಿದರೆ ಅದಕ್ಕೂ ಮಳಿಗೆಗಳನ್ನು ನೀಡುತ್ತೇವೆ. ನಾವು ಯಾರಿಗೂ ಆದ್ಯತೆ ನೀಡುವುದಿಲ್ಲ. 10 ಮಳಿಗೆಗಳಿಗೆ ಐದು ವರ್ಷಗಳ ಅವಧಿಗೆ ಅಮುಲ್‌ಗೆ ಮಾಸಿಕ ರೂ. 7 ಲಕ್ಷ ಬಾಡಿಗೆ ನಿಗದಿಪಡಿಸಲಾಗಿದೆ. ಬಿಎಂಆರ್‌ಸಿಎಲ್ ಇತ್ತೀಚೆಗೆ ಆಹ್ವಾನಿಸಿದ ಟೆಂಡರ್‌ನಲ್ಲಿ ನಂದಿನಿ ಭಾಗವಹಿಸಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Amul Stalls at Metro stations
ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಬದಲು Amul ಮಳಿಗೆಗೆ ಅವಕಾಶ: ಡೂಪ್ಲಿಕೇಟ್‌ ಸಿಎಂ ಡಿಕೆಶಿ ನವರಂಗಿ ಆಟ ಮತ್ತೊಮ್ಮೆ ಬಯಲು- BJP

ಚಿಲ್ಲರೆ ಮಾರಾಟ ಮಳಿಗೆಗಳನ್ನು ಹರಾಜು ಪ್ರಕ್ರಿಯೆಯ ಮೂಲಕ ಕಟ್ಟುನಿಟ್ಟಾಗಿ ಹಂಚಲಾಗುತ್ತದೆ. ನಂದಿನಿ ಅವರು ಟೆಂಡರ್ ಮೂಲಕ ಅರ್ಜಿ ಸಲ್ಲಿಸಿದ್ದರೆ, ನಾವು ಅದನ್ನು ಇತರ ಅರ್ಜಿದಾರರಂತೆ ಪರಿಗಣಿಸುತ್ತೇವೆ ಎಂದು ಅವರು ಹೇಳಿದರು.

ನಂದಿನಿ ಬ್ರಾಂಡ್ ಹೆಸರನ್ನು ತನ್ನ ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡ ಕಾಂಗ್ರೆಸ್ ಪಕ್ಷ ಈಗ ಅಧಿಕಾರಕ್ಕೆ ಬಂದ ನಂತರ ಅದನ್ನು ನಾಶಮಾಡಲು ನಿರ್ಧರಿಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com