
ಬೆಳಗಾವಿ: ಬೆಳಗಾವಿಯಲ್ಲಿ ಕಿಟಕಿ ಪಕ್ಕದ ಸೀಟ್ ಗಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ ಹತ್ಯೆ ಯತ್ನದಲ್ಲಿ ಅಂತ್ಯಗೊಂಡಿದೆ. ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಟಿ ಬಸ್ ಟರ್ಮಿನಲ್ ಗೆ ಬರುತ್ತಿದ್ದ ಬಸ್ ನಲ್ಲಿ ಯುವಕರ ನಡುವೆ ಕಿಟಕಿ ಪಕ್ಕದ ಸೀಟ್ ಗಾಗಿ ಜಗಳ ನಡೆದಿದೆ.
ಯುವಕನೋರ್ವ ಮತ್ತೊಬ್ಬ ಯುವಕನಿಗೆ ಚಾಕು ಇರಿದಿದ್ದಾನೆ. ಗ್ರಾಮದ ಮಜ್ಜು ಸನದಿ(20) ಎಂಬ ಯುವಕನ ಎದೆ ಭಾಗಕ್ಕೆ ಯುವಕರ ಗ್ಯಾಂಗ್ ಒಂದು ಚಾಕು ಇರಿದು ಪರಾರಿ ಆಗಿದೆ. ಮಜ್ಜು ಸನದಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಮ
ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆ ಕೃಷ್ಣಾ ನದಿಗೆ ಬಿದ್ದು ನಾಪತ್ತೆ
ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆ ಕೃಷ್ಣಾ ನದಿಗೆ ಬಿದ್ದು ನಾಪತ್ತೆ ಆಗಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ನಡೆದಿದೆ. ಸಂಗೀತಾ ಮಾಂಜರೇಕರ್(40) ನಾಪತ್ತೆ ಆದ ಮಹಿಳೆ. ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Advertisement