ಸಿಎಂ ಸಿದ್ದರಾಮಯ್ಯ ಅಧಿಕೃತ ನಿವಾಸದ ಮುಂದೆ ಬೃಹತ್ ಮರ ಬಿದ್ದು ವಾಹನಗಳಿಗೆ ಹಾನಿ!

ರಸ್ತೆಯಲ್ಲಿ ಹೋಗುತ್ತಿದ್ದ ಟಿಟಿ ಹಾಗೂ ಇನ್ನೋವಾ ಮೇಲೆ ಮರದ ಕೊಂಬೆಗಳು ಬಿದ್ದಿದ್ದು, ಪರಿಣಾಮ ವಾಹನಗಳಿಗೆ ಹಾನಿಯಾಗಿದೆ.
Huge tree falls in front of CM's residence.
ಧರೆಗುರುಳಿರುವ ಮರ.
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸದ ಮುಂಭಾಗದ ರಸ್ತೆಯಲ್ಲಿ ಬೃಹತ್ ಮರವೊಂದು ಧರೆಗುರುಳಿದ್ದು, ಪರಿಣಾಮ ಸ್ಥಳದಲ್ಲಿದ್ದ ವಾಹನಗಳಿಗೆ ಹಾನಿಯಾಗಿದೆ ಎಂದು ಬುಧವಾರ ತಿಳಿದುಬಂದಿದೆ.

ಗಾಳಿ ಹಾಗೂ ಮಳೆ ಇಲ್ಲದಿದ್ದರೂ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸದ ಬಳಿಯೇ ಮರ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಆದರೆ, ರಸ್ತೆಯಲ್ಲಿ ಹೋಗುತ್ತಿದ್ದ ಟಿಟಿ ಹಾಗೂ ಇನ್ನೋವಾ ಮೇಲೆ ಮರದ ಕೊಂಬೆಗಳು ಬಿದ್ದಿದ್ದು, ಪರಿಣಾಮ ವಾಹನಗಳಿಗೆ ಹಾನಿಯಾಗಿದೆ ಎಂದು ವರದಿಗಳಿಂದ ತಿಳಿದಬಂದಿದೆ.

ಘಟನೆ ಹಿನ್ನೆಲೆಯಲ್ಲಿ ಶಿವಾನಂದ ಸರ್ಕಲ್ ಬಳಿ ಪೊಲೀಸರು ರಸ್ತೆ ಬಂದ್ ಮಾಡಿದ್ದು, ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Huge tree falls in front of CM's residence.
ಬೆಂಗಳೂರು: ಮಳೆ, ಗಾಳಿಯಿಂದ ಬೀಳುವ ಮರ ತೆರವಿಗೆ 28 ತಂಡ ರಚಿಸಿದ BBMP

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com