
ಬೆಂಗಳೂರು: ರಾಜ್ಯ ಸರ್ಕಾರ ಗುತ್ತಿಗೆ ಬೆನ್ನಲ್ಲೇ ಅಲ್ಪಸಂಖ್ಯಾತರಿಗೆ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ ಮಾಡಿದ್ದು, ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ಶೇಕಡಾ 10 ರಿಂದ 15 ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.
ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಿಸುವ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್, "ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯು ಜಾರಿಗೆ ತರುತ್ತಿರುವ ವಿವಿಧ ವಸತಿ ಯೋಜನೆಯಲ್ಲಿ, ಅಲ್ಪಸಂಖ್ಯಾತರ ಮೀಸಲಾತಿಯನ್ನು ಶೇಕಡಾ 10 ರಿಂದ 15 ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ" ಎಂದು ತಿಳಿಸಿದರು.
ರಾಜ್ಯದ ಅಲ್ಪಸಂಖ್ಯಾತರಲ್ಲಿ ಹೆಚ್ಚಿನ ಸಂಖ್ಯೆಯ ಜನ ವಸತಿ ರಹಿತರಾಗಿದ್ದು, ಇದನ್ನು ಗಮನಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು, ಜೂನ್ 19 (ಪಿಟಿಐ) ಜೂನ್ 4 ರಂದು ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ ನಂತರ ಜನಸಂದಣಿ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಮಸೂದೆಯನ್ನು ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ ಎಂದು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಗುರುವಾರ ತಿಳಿಸಿದ್ದಾರೆ.
ಅಲ್ಲದೆ, ತಪ್ಪು ಮಾಹಿತಿ ಅಥವಾ ನಕಲಿ ಸುದ್ದಿಗಳ ವಿರುದ್ಧದ ಮಸೂದೆಗಳು ಮತ್ತು ದ್ವೇಷ ಭಾಷಣಗಳು ಮತ್ತು ಅಪರಾಧಗಳು ಚರ್ಚಿಸಲ್ಪಡುವ ಸಾಧ್ಯತೆಯಿದೆ.
"ಇಂದು ನಾಲ್ಕು ಮಸೂದೆಗಳನ್ನು ಪ್ರಸ್ತಾಪಿಸಲಾಯಿತು - ಕರ್ನಾಟಕ ಜನಸಂದಣಿ ನಿಯಂತ್ರಣ, ಕಾರ್ಯಕ್ರಮಗಳಲ್ಲಿ ಜನಸಂದಣಿಯನ್ನು ನಿರ್ವಹಿಸುವುದು ಮತ್ತು ಸಾಮೂಹಿಕ ಸಭೆ ನಡೆಯುವ ಸ್ಥಳ ಮಸೂದೆ, 2025; ಕರ್ನಾಟಕ ರೋಹಿತ್ ವೇಮುಲಾ ಮಸೂದೆ, 2025; ಕರ್ನಾಟಕ ತಪ್ಪು ಮಾಹಿತಿ, ನಕಲಿ ಸುದ್ದಿ ನಿಷೇಧ ಮಸೂದೆ, 2025; ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ತಡೆಗಟ್ಟುವಿಕೆ ಮಸೂದೆ, 2025," ಎಂದು ಪಾಟೀಲ್ ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.
"ಈ ಮಸೂದೆಗಳನ್ನು ಇಂದಿನ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಕೆಲವು ಮಸೂದೆಗಳ ಕುರಿತು ವಿವರವಾದ ಚರ್ಚೆಯ ಅಗತ್ಯವಿದೆ ಎಂದು ನಾನು ಉಲ್ಲೇಖಿಸಿದ್ದೇನೆ. ಮುಂದಿನ ಸಂಪುಟ ಸಭೆಗೂ ಮುನ್ನ ಸಂಬಂಧಪಟ್ಟ ಸಚಿವರು ಸಭೆ ಸೇರಿ ಚರ್ಚಿಸಿ ಮಸೂದೆಗಳನ್ನು ಸಂಪುಟದ ಮುಂದೆ ತರಬೇಕೆಂದು ನಿರ್ಧರಿಸಲಾಗಿದೆ" ಎಂದು ಅವರು ಹೇಳಿದರು.
ಸಾಚಾರ್ ಕಮಿಟಿ ವರದಿಯನ್ನೂ ಕೂಡ ಈಗ ಕೇಂದ್ರ ಪರಿಗಣಿಸುತ್ತಿದೆ. ಕೇಂದ್ರದ ಸೂಚನೆಗಳನ್ನು ಗಮನಿಸಿ ಸಾಮಾಜಿಕ ನ್ಯಾಯದ ಪಾಲನೆ ಮಾಡುತ್ತಿದ್ದೇವೆ. ನಿಯಮಗಳಿಗೆ ಕ್ಯಾಬಿನೆಟ್ ಅನುಮೋದನೆ ಸಾಕು. ಇದು ಎಲ್ಲ ಅಲ್ಪಸಂಖ್ಯಾತರಿಗೂ ಅನ್ವಯವಾಗುತ್ತದೆ. ಮುಸ್ಲಿಂ, ಜೈನರು, ಕ್ರಿಶ್ಚಿಯನ್ ಎಲ್ಲರೂ ಕೂಡ ಇದರಲ್ಲಿ ಒಳಗೊಳ್ಳುತ್ತಾರೆ. ಇದಕ್ಕೆ ಬೇಕಾದ ಹಲವು ಅಧ್ಯಯನ ವರದಿಗಳೂ ಕೂಡ ಇವೆ. ಬಡವರಿಗೆ ಮನೆ ಮಾಡಿಕೊಡುವುದರಲ್ಲಿ ರಾಜಕೀಯ ವಾಸನೆ ಹುಡುಕುವವರಿಗೆ ನಾವು ಉತ್ತರ ಕೊಡಲ್ಲ. ವಸತಿ ಹೀನರಿಗೆ ಹೆಚ್ಚಿನ ಸೌಲಭ್ಯಗಳನ್ನು ಕೊಡಬೇಕು ಎಂಬುದು ಸರ್ಕಾರದ ಉದ್ದೇಶ ಎಂದು ಎಂದು ಹೇಳಿದರು.
ಇನ್ನು ಕಳೆದ ಜೂನ್ 4 ರಂದು ಸಂಜೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ ನಂತರ ಜನಸಂದಣಿ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಮಸೂದೆ ಮಂಡಿಸುವ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ ಎಂದು ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
"ಇಂದು ನಾಲ್ಕು ಮಸೂದೆಗಳನ್ನು ಪ್ರಸ್ತಾಪಿಸಲಾಯಿತು - ಕರ್ನಾಟಕ ಜನಸಂದಣಿ ನಿಯಂತ್ರಣ, ಕಾರ್ಯಕ್ರಮಗಳಲ್ಲಿ ಜನಸಂದಣಿಯನ್ನು ನಿರ್ವಹಿಸುವುದು ಮತ್ತು ಸಾಮೂಹಿಕ ಸಭೆ ನಡೆಯುವ ಸ್ಥಳ ಮಸೂದೆ, 2025; ಕರ್ನಾಟಕ ರೋಹಿತ್ ವೇಮುಲಾ ಮಸೂದೆ, 2025; ಕರ್ನಾಟಕ ತಪ್ಪು ಮಾಹಿತಿ, ನಕಲಿ ಸುದ್ದಿ ನಿಷೇಧ ಮಸೂದೆ, 2025; ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ತಡೆಗಟ್ಟುವಿಕೆ ಮಸೂದೆ, 2025" ಎಂದು ಎಚ್ ಕೆ ಪಾಟೀಲ್ ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.
"ಈ ಮಸೂದೆಗಳನ್ನು ಇಂದಿನ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಕೆಲವು ಮಸೂದೆಗಳ ಕುರಿತು ವಿವರವಾದ ಚರ್ಚೆಯ ಅಗತ್ಯವಿದೆ ಎಂದು ನಾನು ಉಲ್ಲೇಖಿಸಿದ್ದೇನೆ. ಮುಂದಿನ ಸಂಪುಟ ಸಭೆಗೂ ಮುನ್ನ ಸಂಬಂಧಪಟ್ಟ ಸಚಿವರು ಸಭೆ ಸೇರಿ ಚರ್ಚಿಸಿ ಮಸೂದೆಗಳನ್ನು ಸಂಪುಟದ ಮುಂದೆ ತರಬೇಕೆಂದು ನಿರ್ಧರಿಸಲಾಗಿದೆ" ಎಂದು ಅವರು ಹೇಳಿದರು.
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಎದುರಿಸುವ ವಿದ್ಯಾರ್ಥಿಗಳಿಗೆ 1 ಲಕ್ಷ ರೂ.ವರೆಗೆ ಪರಿಹಾರ ಮತ್ತು ತಪ್ಪಿತಸ್ಥರಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಲು ರೋಹಿತ್ ವೇಮುಲಾ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ ಎಂದರು.
ಶಿಕ್ಷಣ ವ್ಯವಸ್ಥೆಯಲ್ಲಿ ಯಾರೂ ಜಾತಿ ಆಧಾರಿತ ತಾರತಮ್ಯವನ್ನು ಎದುರಿಸದಂತೆ ನೋಡಿಕೊಳ್ಳಲು "ರೋಹಿತ್ ವೇಮುಲಾ ಕಾಯ್ದೆ"ಯನ್ನು ಜಾರಿಗೆ ತರುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಳೆದ ಏಪ್ರಿಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.
Advertisement