ಬೆಳಗಿನ ಉಪಹಾರ ಸೇವಿಸದೆ ನಿತ್ರಾಣ: ಶಾಲಾ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ

ಮಲ್ಲೇಶ್ವರದ 13 ನೇ ಅಡ್ಡ ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಕೃತಿಕಾ ಉಪಾಹಾರ ಸೇವಿಸದೆ ಶಾಲೆಗೆ ಹೋಗಿದ್ದಳು.
KC general hospital
ಕೆಸಿ ಜನರಲ್ ಆಸ್ಪತ್ರೆ.
Updated on

ಬೆಂಗಳೂರು: ಬೆಳಗಿನ ಉಪಹಾರ ಸೇವಿಸದೆ ಶಾಲೆಗೆ ತೆರಳಿದ್ದ ವಿದ್ಯಾರ್ಥಿನಿಯೊಬ್ಬಳು ನಿತ್ರಾಣಗೊಂಡು ಶಾಲಾ ಕಟ್ಟಡದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಮಲ್ಲೇಶ್ವರಂನಲ್ಲಿ ನಡೆದಿದೆ.

ಮಲ್ಲೇಶ್ವರದ 13 ನೇ ಅಡ್ಡ ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಕೃತಿಕಾ (16) ಉಪಾಹಾರ ಸೇವಿಸದೆ ಶಾಲೆಗೆ ಹೋಗಿದ್ದಳು. ಎರಡನೇ ಮಹಡಿಯ ಕಾರಿಡಾರ್ ಗೋಡೆಯ ಬಳಿ ಬಾಗಿ ನಿಂತಿದ್ದಾಗ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆಂದು ತಿಳಿದುಬಂದಿದೆ.

ಕೂಡಲೇ ಶಾಲಾ ಸಿಬ್ಬಂದಿ ವಿದ್ಯಾರ್ಥಿಯನ್ನು ಕೆಸಿ ಜನರಲ್ ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆ ಕೊಡಿಸಿದ್ದಾರೆ. ಬಾಲಕಿಗೆ ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ಗಾಯಗಳಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

KC general hospital
ಕ್ಯಾನ್ಸರ್ ಪೀಡಿತ ಮಕ್ಕಳಿಗೆ ವಿಶೇಷ ಶಾಲೆ ಸ್ಥಾಪನೆ: ಇದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಕನಸಿನ ಕೂಸು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com