
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದರು.
ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಸಿಟಿ ರವಿ, ಸಂಸದ ಡಾ. ಮಂಜುನಾಥ್ ಮತ್ತಿತರ ಬಿಜೆಪಿ ನಾಯಕರು ಹೂ ಗುಚ್ಚ ನೀಡಿ ಸ್ವಾಗತಿಸಿದರು.
ಶುಕ್ರವಾರ ನೆಲಮಂಗಲ ಸಮೀಪ ನಡೆಯುವ ಬಿಜಿಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ.
ಶುಕ್ರವಾರ ಬೆಳಗ್ಗೆ 10-30ಕ್ಕೆ ನೆಲಮಂಗಲಕ್ಕೆ ತೆರಳಿ ಬಿಜೆಪಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ ನವದೆಹಲಿಗೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು ಭೇಟಿ ವೇಳೆಯಲ್ಲಿ ರಾಜ್ಯ ಬಿಜೆಪಿ ನಾಯಕರ ಜೊತೆಗೆ ಮಾತುಕತೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
Advertisement