
ಬಳ್ಳಾರಿ: ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಹೊಸೂರು ಚಂಪಾ ಗ್ರಾಮದ ಸಿದ್ದವ್ವ ಎಂದು ಗುರುತಿಸಲಾಗಿದೆ.
ಮಂಗಳವಾರ ತನ್ನ ಮೂವರು ಮಕ್ಕಳೊಂದಿಗೆ ಸಿದ್ದವ್ವ ಕಾಣೆಯಾಗಿದ್ದರು. ಬುಧವಾರ ಬೆಳಗ್ಗೆ ಕೃಷಿ ಹೊಂಡದಲ್ಲಿ ಮೃತದೇಹಗಳು ಪತ್ತೆಯಾಗಿದ್ದು, ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸಿದ್ದವ್ವ ಸಾವಿಗೆ ಕಾರಣಗಳು ಇನ್ನೂ ಪತ್ತೆಯಾಗಿಲ್ಲ. ಸದ್ಯ ಪೊಲೀಸರು ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಹೊಸೂರು ಗ್ರಾಮದ ನಿವಾಸಿ ಸಂಜಯ್ (32) ಎಂಬಾತನ ಜತೆ ಸಿದ್ದವ್ವ ಮದುವೆಯಾಗಿ ಸುಮಾರು ಒಂದು ದಶಕವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ತನಿಖೆ ಮುಂದುವರಿದಂತೆ ಕುರುಗೋಡು ಪೊಲೀಸರು ಸಂಜಯ್‌ನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.
Advertisement