ಬೆಂಗಳೂರಿನಲ್ಲಿ 19 ಬಾರ್‌, ರೆಸ್ಟೋರೆಂಟ್‌ಗಳು 'ಕಾನೂನುಬಾಹಿರ' ಚಟುವಟಿಕೆಯಲ್ಲಿ ತೊಡಗಿವೆ!

ನಗರದ ಪಶ್ಚಿಮ ವಲಯದಲ್ಲಿರುವ ಹಲವಾರು ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮಹಿಳಾ ಸರ್ವರ್‌ಗಳನ್ನು ಅಕ್ರಮವಾಗಿ ನೇಮಿಸಿಕೊಂಡು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೆಂಗಳೂರು ಪೊಲೀಸರು ನಡೆಸಿದ ತಡರಾತ್ರಿ ವಿಶೇಷ ಕಾರ್ಯಾಚರಣೆಯಲ್ಲಿ 19 ಬಾರ್‌ ಮತ್ತು ರೆಸ್ಟೋರೆಂಟ್‌ಗಳು COPTA ನಿಯಮಗಳನ್ನು ಉಲ್ಲಂಘಿಸಿ, ಮಹಿಳಾ ಸರ್ವರ್‌ಗಳನ್ನು ಅಕ್ರಮವಾಗಿ ನೇಮಿಸಿಕೊಂಡು "ಕಾನೂನುಬಾಹಿರ" ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ನಗರದ ಪಶ್ಚಿಮ ವಲಯದಲ್ಲಿರುವ ಹಲವಾರು ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮಹಿಳಾ ಸರ್ವರ್‌ಗಳನ್ನು ಅಕ್ರಮವಾಗಿ ನೇಮಿಸಿಕೊಂಡು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ವಿಶ್ವಾಸಾರ್ಹ ಮಾಹಿತಿ ಬಂದ ನಂತರ ಗುರುವಾರ ರಾತ್ರಿ ದಾಳಿ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.

ಮಾಹಿತಿಯ ಆಧಾರದ ಮೇಲೆ, ಪಶ್ಚಿಮ ವಲಯದಲ್ಲಿ 11 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಸಾಂದರ್ಭಿಕ ಚಿತ್ರ
ನಗರದಲ್ಲಿ ಕಾನೂನು ಉಲ್ಲಂಘಿಸಿ ನಡೆಯುತ್ತಿದೆ ಹುಕ್ಕಾ ಬಾರ್‌!

ಉಪ್ಪಾರಪೇಟೆ, ಕಾಟನ್‌ಪೇಟೆ, ಕಲಾಸಿಪಾಳ್ಯ, ಕಬ್ಬನ್ ಪಾರ್ಕ್ ಮತ್ತು ಅಶೋಕನಗರ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಬರುವ ಈ ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳ ಮೇಲೆ ವಿಶೇಷ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ದಾಳಿ ಸಮಯದಲ್ಲಿ 19 ಬಾರ್ ಮತ್ತು ರೆಸ್ಟೋರೆಂಟ್‌ಗಳು ಪ್ರಚೋದನಕಾರಿಯಾಗಿ ಬಟ್ಟೆ ಧರಿಸಿ, ಗ್ರಾಹಕರ ಟೇಬಲ್‌ಗಳ ಬಳಿ ಅಸಭ್ಯವಾಗಿ ನಿಂತಿರುವ ಮಹಿಳಾ ಸರ್ವರ್‌ಗಳು ಪತ್ತೆಯಾಗಿದ್ದು, ಅವರನ್ನು ನಿಯಮಗಳನ್ನು ಉಲ್ಲಂಘಿಸಿ ನೇಮಿಸಿಕೊಂಡಿರುವುದು ಕಂಡುಬಂದಿದೆ. ಮಹಿಳಾ ಭದ್ರತಾ ಸಿಬ್ಬಂದಿಯ ಅನುಪಸ್ಥಿತಿ ಮತ್ತು ಅಡುಗೆ ಪ್ರದೇಶಗಳಲ್ಲಿ ಸ್ವಚ್ಛತೆಯ ಕೊರತೆ ಸೇರಿದಂತೆ ಮತ್ತಷ್ಟು ಕಾನೂನು ಉಲ್ಲಂಘನೆಗಳನ್ನು ಗಮನಿಸಲಾಗಿದೆ. ಸರಿಯಾದ ಧೂಮಪಾನ ವಲಯ ಗೊತ್ತುಪಡಿಸದಿರುವುದು ಅಥವಾ ನಿರ್ವಹಿಸದಿರುವುದು ಮತ್ತು ಅನುಮತಿಸಲಾದ ಸಮಯ ಮೀರಿ ಕಾರ್ಯನಿರ್ವಹಿಸುವುದು ಕಂಡುಬಂದಿದೆ" ಎಂದು ಬೆಂಗಳೂರು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, COTPA (ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ) ನಿಯಮಗಳನ್ನು ಉಲ್ಲಂಘಿಸಿದ ಗ್ರಾಹಕರಿಗೆ ಸ್ಥಳದಲ್ಲೇ ದಂಡ ವಿಧಿಸಲಾಗಿದೆ.

ಬಾರ್ ಮತ್ತು ರೆಸ್ಟೋರೆಂಟ್‌ಗಳ ಮಾಲೀಕರ ವಿರುದ್ಧ ಹೆಚ್ಚಿನ ಕಾನೂನು ಕ್ರಮಕ್ಕಾಗಿ ಆಯಾ ಪೊಲೀಸ್ ಠಾಣೆಗಳಿಗೆ ವರದಿ ಸಲ್ಲಿಸಲಾಗಿದೆ.

"ಇನ್ನೊಂದು ಗಮನಾರ್ಹ ಅಂಶವೆನೆಯೆಂದರೆ ಈ ಉಲ್ಲಂಘನೆಗಳು ಪೊಲೀಸ್ ನಿಯಮಗಳಿಗೆ ಮಾತ್ರ ಸೀಮಿತವಾಗಿಲ್ಲ, ಆರೋಗ್ಯ ಮತ್ತು ಅಬಕಾರಿ ಇಲಾಖೆಗಳಿಗೂ ಸಂಬಂಧಿಸಿವೆ. ಈ ಉಲ್ಲಂಘನೆಗಳ ವಿರುದ್ಧ ಸೂಕ್ತ ಕ್ರಮಕ್ಕಾಗಿ ಸಂಬಂಧಪಟ್ಟ ಇಲಾಖೆಗಳಿಗೆ ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ವಾಣಿಜ್ಯ ಸಂಸ್ಥೆಗಳ ಮೇಲೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ಮುಂದುವರಿಯುತ್ತದೆ. ಮತ್ತೆ ನಿಯಮಗಳನ್ನು ಉಲ್ಲಂಘಿಸುವುದು ಕಂಡುಬಂದರೆ, ಅವರ ಪರವಾನಗಿಗಳನ್ನು ರದ್ದುಗೊಳಿಸಲಾಗುತ್ತದೆ" ಎಂದು ಎಚ್ಚರಿಸಲಾಗಿದೆ.

ಯಾವುದೇ ಅನಾನುಕೂಲತೆ ಎದುರಾದರೆ ಅಥವಾ ಅಂತಹ ಯಾವುದೇ ಉಲ್ಲಂಘನೆಗಳು ಕಂಡುಬಂದರೆ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡುವಂತೆ ಪೊಲೀಸರು ಸಾರ್ವಜನಿಕರನ್ನು ಕೋರಿದ್ದಾರೆ ಮತ್ತು ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com