
ಬೆಂಗಳೂರು: ಲೋಕಾಯುಕ್ತರ ಹೆಸರಲ್ಲಿ ಹಲವಾರು ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಿವೃತ್ತ ಹೆಡ್ ಕಾನ್‌ಸ್ಟೆಬಲ್ ನಿಂಗಪ್ಪ ಸಾವಂತ್‌ಗೆ ಹೈಕೋರ್ಟ್ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ನಿಂಗಪ್ಪ ಪತ್ನಿ ಜಿ ಕೆ ಚಂದ್ರಕಲಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠವು ನ್ಯಾಯಾಲಯದ ವ್ಯಾಪ್ತಿ ತೊರೆಯುವಂತಿಲ್ಲ. ತನಿಖೆಗೆ ಸಹಕರಿಸಬೇಕು ಎಂಬ ಷರತ್ತುಗಳನ್ನು ವಿಧಿಸಿದೆ. ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗಪ್ಪ ಮತ್ತು ಲೋಕಾಯುಕ್ತ ಪೊಲೀಸರು ಮಾಧ್ಯಮಗಳ ಜೊತೆ ಮಾತನಾಡುವಂತಿಲ್ಲ ಎಂಬ ಷರತ್ತನ್ನೂ ಇದೇ ವೇಳೆ ನ್ಯಾಯಾಲಯ ವಿಧಿಸಿದೆ.
ಸರ್ಕಾರಿ ಅಧಿಕಾರಿಗಳಿಂದ ಹಲವಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಜೂನ್ 2 ರಂದು ನಿಂಗಪ್ಪ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.
Advertisement