ಬೆಂಗಳೂರು ಕಾಲ್ತುಳಿತ ಪ್ರಕರಣ: CM-DMC ಸೇರಿ 13 ಮಂದಿ ವಿರುದ್ಧ ಟಿ.ಜೆ ಅಬ್ರಹಾಂ ದೂರು; RCB ವಿರುದ್ಧ ಫಿಕ್ಸಿಂಗ್ ಆರೋಪ

ಐಪಿಎಲ್ ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆ ನಡೆಸಿದ್ದೇಕೆ? ಹಾಗಿದ್ದರೆ, ಮೊದಲೇ ಆರ್‌'ಸಿಬಿ ಗೆಲ್ಲುವ ಬಗ್ಗೆ ಕೆಎಸ್‍ಸಿಎ ಹಾಗೂ ಆರ್‌ಸಿಬಿ ಆಡಳಿತ ಮಂಡಳಿಗೆ ಮಾಹಿತಿ ಇತ್ತಾ? ಅಥವಾ ಮ್ಯಾಚ್ ಫಿಕ್ಸಿಂಗ್ ಆಗಿತ್ತಾ?
Social activist TJ Abraham
ಟಿ.ಜೆ. ಅಬ್ರಹಾಂ
Updated on

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿ 13 ಮಂದಿ ವಿರುದ್ಧ ಕಬ್ಬನ್‍ಪಾರ್ಕ್ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಎಂಬುವರು ನೀಡಿದ ದೂರಿನನ್ವಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಡಿಪಿಎಆರ್ ಕಾರ್ಯದರ್ಶಿ ಸತ್ಯವತಿ, ಕೆಎಸ್‍ಸಿಎ, ಆರ್‌ಸಿಬಿ, ಅಮಾನತುಗೊಂಡ ಪೊಲೀಸ್ ಅಧಿಕಾರಿಗಳಾದ ವಿಕಾಸ್ ಕುಮಾರ್, ಶೇಖರ್ ತೆಕ್ಕಣನವರ್, ವಿಧಾನಸೌಧ ಡಿಸಿಪಿ ಕರಿಬಸನಗೌಡ ಸೇರಿ ಹಲವರ ವಿರುದ್ಧ ಕಬ್ಬನ್‍ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜೂ.4ರಂದು ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಈ ಸಾವುಗಳಿಗೆ ಸರಕಾರ ಉತ್ತರವನ್ನು ಕೊಡಬೇಕು ಎಂದು ದೂರಿನಲ್ಲಿ ಅಬ್ರಹಾಂ ಆಗ್ರಹಿಸಿದ್ದಾರೆ.

ಕೆಎಸ್‍ಸಿಎ ಮತ್ತು ಆರ್‌ಸಿಬಿ ಆಡಳಿತಾಧಿಕಾರಿಗಳು ಯಾವುದೇ ಪೂರ್ವ ಯೋಜನೆಯಿಲ್ಲದೆ ಕಾರ್ಯಕ್ರಮ ನಡೆಸಿದ್ದಾರೆ. ಕಾರ್ಯಕ್ರಮವನ್ನು 2 ದಿನ ಮುಂದೂಡಬಹುದಿತ್ತು. ಈ ದುರಂತಕ್ಕೆ ಕಾರಣರಾದವರ ಬಗ್ಗೆ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.

Social activist TJ Abraham
IMA ಹಗರಣ: ಐಪಿಎಸ್ ಅಧಿಕಾರಿ ಹೇಮಂತ್ ಎಂ ನಿಂಬಾಳ್ಕರ್ ವಿರುದ್ಧ ಸಿಬಿಐ ತನಿಖೆ ಮುಂದುವರಿಕೆಗೆ ಟಿಜೆ ಅಬ್ರಹಾಂ ಮನವಿ

ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ರಹಾಂ ಅವರು, ಕಾಲ್ತುಳಿತವು ಯೋಜಿತ ಮತ್ತು ರಾಜಕೀಯ ಪ್ರೇರಿತವಾಗಿದ್ದು, ಇದರ ಪರಿಣಾಮವಾಗಿ 11 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಖಾಸಗಿ ಕ್ರಿಕೆಟ್ ತಂಡದ ವಿಜಯೋತ್ಸವ ಮೆರವಣಿಗೆಯಲ್ಲಿ ಶಿವಕುಮಾರ್ ಅವರ ಪಾತ್ರದ ಕುರಿತೂ ಅವರು ಪ್ರಶ್ನೆ ಮಾಡಿದರು.

ಐಪಿಎಲ್ ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆ ನಡೆಸಿದ್ದೇಕೆ? ಹಾಗಿದ್ದರೆ, ಮೊದಲೇ ಆರ್‌'ಸಿಬಿ ಗೆಲ್ಲುವ ಬಗ್ಗೆ ಕೆಎಸ್‍ಸಿಎ ಹಾಗೂ ಆರ್‌ಸಿಬಿ ಆಡಳಿತ ಮಂಡಳಿಗೆ ಮಾಹಿತಿ ಇತ್ತಾ? ಅಥವಾ ಮ್ಯಾಚ್ ಫಿಕ್ಸಿಂಗ್ ಆಗಿತ್ತಾ? ಈ ಬಗ್ಗೆ ಅನುಮಾನವಿದೆ. ಈ ಬಗ್ಗೆಯೂ ಬಿಸಿಸಿಐಗೆ ಮುಂದಿನ ದಿನಗಳಲ್ಲಿ ದೂರು ಕೊಡುತ್ತೇನೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com