ರಾಜ್ಯ
ಬಳ್ಳಾರಿ: ಕಮಲಾಪುರದ ಅಟಲ್‌ಜೀ ಮೃಗಾಲಯದಲ್ಲಿ ಹೆಣ್ಣು ಹುಲಿ 'ದೇವಿ' ಸಾವು
18 ರಿಂದ 19 ವರ್ಷದ ದೇವಿ ಮಾನವ-ವನ್ಯಜೀವಿ ಸಂಘರ್ಷದಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡು ನಿತ್ರಾಣವಾಗಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಸ್ಥಳಾಂತರಿಸಲಾಗಿತ್ತು.
ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ Zoological ಪಾರ್ಕ್‌ನಲ್ಲಿ 'ದೇವಿ' ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದಾಗಿ ಮೃತಪಟ್ಟಿದೆ ಎಂದು ಉಪ ಸಂರಕ್ಷಣಾಧಿಕಾರಿ ಹಾಗೂ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ರಾಜೇಶ್ ನಾಯ್ಕ ತಿಳಿಸಿದ್ದಾರೆ.
ಅಂದಾಜು 18 ರಿಂದ 19 ವರ್ಷದ ದೇವಿ ಮಾನವ-ವನ್ಯಜೀವಿ ಸಂಘರ್ಷದಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡು ನಿತ್ರಾಣವಾಗಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಸ್ಥಳಾಂತರಿಸಲಾಗಿತ್ತು.
ಕಳೆದ ಎರಡು ವರ್ಷಗಳಿಂದ ಮೃಗಾಲಯದಲ್ಲಿರುವ ರಕ್ಷಣಾ ಕೇಂದ್ರದಲ್ಲಿ ವೈದ್ಯೋಪಚಾರ ನೀಡಲಾಗಿತ್ತು. ಆರೋಗ್ಯದಲ್ಲಿಯೂ ಸುಧಾರಣೆ ಕಂಡು ಬಂದಿತ್ತು. ಆದರೆ ಇದೀಗ ವಯೋಸಹಜವಾಗಿ ಮೃತಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ