FIR
ಎಫ್ಐಆರ್online desk

ಬೆಂಗಳೂರು: ವಿದ್ಯುತ್ ತಗುಲಿ ಬಾಲಕ ಸಾವು; ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು

ಜೂನ್ 15 ರಂದು ನೇಪಾಳ ಮೂಲದ ಅನಂತ್ ಎಂಬ ಬಾಲಕ ತನ್ನ ಬಾಡಿಗೆ ಮನೆಯ ಮೂರನೇ ಮಹಡಿಯಲ್ಲಿ ಪೊರಕೆಯೊಂದಿಗೆ ಆಟವಾಡುತ್ತಿದ್ದಾಗ ಹೈಟೆನ್ಷನ್ ತಂತಿ ತಗುಲಿ ಈ ಘಟನೆ ಸಂಭವಿಸಿದೆ.
Published on

ಬೆಂಗಳೂರು: ಕೆ ಆರ್ ಪುರಂನಲ್ಲಿ ವಿದ್ಯುತ್ ಶಾಕ್ ನಿಂದ 10 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್(ಬೆಸ್ಕಾಂ) ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಜೂನ್ 15 ರಂದು ನೇಪಾಳ ಮೂಲದ ಅನಂತ್ ಎಂಬ ಬಾಲಕ ತನ್ನ ಬಾಡಿಗೆ ಮನೆಯ ಮೂರನೇ ಮಹಡಿಯಲ್ಲಿ ಪೊರಕೆಯೊಂದಿಗೆ ಆಟವಾಡುತ್ತಿದ್ದಾಗ ಹೈಟೆನ್ಷನ್ ತಂತಿ ತಗುಲಿ ಈ ಘಟನೆ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಘಟನೆ ನಡೆದಾಗ ಬಾಲಕ ಸ್ವತಂತ್ರ ನಗರದ ತನ್ನ ಮನೆಯಲ್ಲಿ ಒಬ್ಬನೇ ಇದ್ದ. ಆ ಸಮಯದಲ್ಲಿ ಮನೆಗೆಲಸ ಮಾಡುವ ಆತನ ತಾಯಿ ಕೆಲಸಕ್ಕೆ ತೆರಳಿದ್ದರು.

FIR
ಗಾಳಿಪಟ ಹಾರಿಸುವಾಗ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಬಾಲಕ ಸಾವು!

ಘಟನೆಯ ನಂತರ, ಬಾಲಕನ ಕಿರುಚಾಟ ಕೇಳಿದ ನೆರೆಹೊರೆಯವರು ಆತನನ್ನು ಕೆ ಆರ್ ಪುರಂ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು ಮತ್ತು ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟಗಾಯಗಳ ವಾರ್ಡ್‌ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಶುಕ್ರವಾರ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂತ್ರಸ್ತೆಯ ತಾಯಿಯ ದೂರಿನ ಆಧಾರದ ಮೇಲೆ, ಕಟ್ಟಡ ಮಾಲೀಕರು, ಬಿಬಿಎಂಪಿ ಮತ್ತು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 106(ನಿರ್ಲಕ್ಷ್ಯದಿಂದ ಸಾವು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com