ರಾಜ್ಯ

ಇರಾನ್‌ನಲ್ಲಿ ಸಿಲುಕಿದ್ದ ಒಂದೇ ಗ್ರಾಮದ 16 ಕನ್ನಡಿಗರು ಬೆಂಗಳೂರಿಗೆ ವಾಪಸ್

ಇರಾನ್‌ನಲ್ಲಿ ಸಿಲುಕಿದ್ದ ಒಂದೇ ಗ್ರಾಮದ 16 ಕನ್ನಡಿಗರು ಬೆಂಗಳೂರಿಗೆ ವಾಪಸ್
16 ಕನ್ನಡಿಗರು ಬೆಂಗಳೂರಿಗೆ ಸುರಕ್ಷಿತವಾಗಿ ಬಂದಿದ್ದಾರೆ
Published On :

ಬೆಂಗಳೂರು: ಯುದ್ಧ ಪೀಡಿತ ಇರಾನ್‌ನಲ್ಲಿ ಸಿಲುಕಿದ್ದ ಒಂದೇ ಗ್ರಾಮದ 16 ಕನ್ನಡಿಗರು ಶನಿವಾರ ಬೆಂಗಳೂರಿಗೆ ಸುರಕ್ಷಿತವಾಗಿ ಬಂದಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರಿಗೆ ಆತ್ಮೀಯ ಸ್ವಾಗತ ನೀಡಲಾಯಿತು.

ವಿದ್ಯಾಭ್ಯಾಸ, ಉದ್ಯೋಗ, ಸ್ವಯಂ ಉದ್ಯೋಗಕ್ಕಾಗಿ ಇರಾನ್ ಗೆ ತೆರಳಿದ್ದ ಚಿಕ್ಕಬಳ್ಳಾಫುರ ಜಿಲ್ಲೆಯ ಗೌರಿಬಿದನೂರು ತಾಲೂಜಿನ ಅಲಿಪುರ ಗ್ರಾಮದ 16 ಕನ್ನಡಿಗರು ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದ್ದು, ಅಲ್ಲಿಂದ ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದರು.

ವಿಮಾನ ನಿಲ್ದಾಣದಲ್ಲಿ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ ಮತ್ತು ಕುಟುಂಬ ಸದಸ್ಯರು ಸ್ವದೇಶಕ್ಕೆ ಮರಳಿದವರಿಗೆ ಹೂವಿನ ಹಾರ ಹಾಕಿ ಆತ್ಮೀಯವಾಗಿ ಸ್ವಾಗತಿಸಿದರು.

ಶಾಸಕ ಪುಟ್ಟಸ್ವಾಮಿ ಗೌಡ ಅವರು, ತಾಯ್ನಾಡಿಗೆ ಹಿಂದಿರುಗಿದವರಿಗೆ ಭಾರತದ ತ್ರಿವರ್ಣ ಧ್ವಜ ನೀಡಿ, ಅವರೊಂದಿಗೆ "ಭಾರತ್ ಮಾತಾ ಕಿ ಜೈ" ಘೋಷಣೆ ಕೂಗಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿರುಗಿದವರಲ್ಲಿ ಹೆಚ್ಚಿನವರು ಚಿಕ್ಕಬಳ್ಳಾಪುರ ಜಿಲ್ಲೆಯ ಅಲಿಪುರ ಗ್ರಾಮದ ನಿವಾಸಿಗಳು ಎಂದು ಹೇಳಿದರು.

"ಅಲಿಪುರ ಗ್ರಾಮದ ಸುಮಾರು 80 ಜನ ಇನ್ನೂ ಇರಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಈ ವಿಷಯದ ಬಗ್ಗೆ ನಾನು ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರೊಂದಿಗೆ ಮಾತನಾಡಿದ್ದೇನೆ ಮತ್ತು ಒಂದು ಅಥವಾ ಎರಡು ದಿನಗಳಲ್ಲಿ ಅವರನ್ನು ಮರಳಿ ಕರೆತರುವ ವ್ಯವಸ್ಥೆ ಮಾಡಲಾಗುವುದು" ಎಂದು ಶಾಸಕರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.