ಬೆಂಗಳೂರು: ಕಾಡುಗೋಡಿಯಲ್ಲಿ 4,000 ಕೋಟಿ ರೂ ಮೌಲ್ಯದ 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ನಿರ್ದೇಶನದ ಮೇರೆಗೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ.
 forest land reclaimed
ಅರಣ್ಯ ಭೂಮಿ ಒತ್ತುವರಿ ತೆರವು
Updated on

ಬೆಂಗಳೂರು: ರಾಜ್ಯ ಸರ್ಕಾರವು ಸೋಮವಾರ ಕಾಡುಗೋಡಿ ತೋಟದಲ್ಲಿ ಅತಿಕ್ರಮಣಗೊಂಡಿದ್ದ 4,000 ಕೋಟಿ ರೂ. ಮೌಲ್ಯದ 120 ಎಕರೆ ಅರಣ್ಯ ಭೂಮಿಯನ್ನು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ನಿರ್ದೇಶನದ ಮೇರೆಗೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ.

ಬೆಂಗಳೂರು ಪೂರ್ವ ತಾಲೂಕು ಬಿದರಹಳ್ಳಿ ಹೋಬಳಿ, ಕಾಡುಗೋಡಿ ಪ್ಲಾಂಟೇಷನ್​​ನ 120 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್​ನಲ್ಲಿ ಇಂದು ಬೆಳಗ್ಗೆಯೇ ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಬೆಂಗಳೂರು ನಗರ ಅರಣ್ಯ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ, ಕಾಡುಗೋಡಿಯ ಪ್ಲಾಂಟೇಷನ್​​ನ ಅರಣ್ಯ ಭೂಮಿಯ ಒತ್ತುವರಿ ತೆರವು ಮಾಡಿ, ಮರು ವಶಕ್ಕೆ ಪಡೆಯಲು ಕಾರ್ಯಾಚರಣೆ ಮುಂದುವರಿಸಿದ್ದಾರೆ‌.

ಕಾರ್ಯಾಚರಣೆಯ ಸಮಯದಲ್ಲಿ, ಅಧಿಕಾರಿಗಳು ಗಡಿಗಳನ್ನು ಗುರುತಿಸಿ, ಬೇಲಿ ಹಾಕಿ, ಸ್ಥಳೀಯ ಪ್ರಭೇದದ ಸಸಿಗಳನ್ನು ನೆಡುವ ಕಾರ್ಯದಲ್ಲಿ ನಿರತರಾಗಿದ್ದರು.

ಇಂದು ಮರಳಿ ಪಡೆದ ಅರಣ್ಯ ಭೂಮಿಯ ಅಂದಾಜು ಮಾರುಕಟ್ಟೆ ಮೌಲ್ಯ ಸುಮಾರು 4,000 ಕೋಟಿ ರೂ.ಗಳಷ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 forest land reclaimed
ಬೆಂಗಳೂರು: ವಾಯುಪಡೆ ಸ್ವಾಧೀನದ 444 ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಈಶ್ವರ್ ಖಂಡ್ರೆ ಸೂಚನೆ

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇತ್ತೀಚೆಗೆ ನಡೆದ ಪರಿಶೀಲನಾ ಸಭೆಯಲ್ಲಿ, ಬೆಂಗಳೂರು ವ್ಯಾಪಕವಾಗಿ ಬೆಳೆಯುತ್ತಿದ್ದು, ಹಸಿರು ಹೊದಿಕೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಹೀಗಾಗಿ ಶ್ವಾಸತಾಣಗಳ ಸಂರಕ್ಷಣೆ ಮಾಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದರು.

ಈ ನಿಟ್ಟಿನಲ್ಲಿ, ಹಸಿರು ವಲಯಗಳನ್ನು ಪ್ರಮುಖ ಉಸಿರಾಟದ ಸ್ಥಳಗಳಾಗಿ ರಕ್ಷಿಸಲು ಸರ್ಕಾರ ಸ್ಪಷ್ಟ ಸೂಚನೆಗಳನ್ನು ನೀಡಿದೆ ಮತ್ತು ಕಾನೂನಿನ ಪ್ರಕಾರ ಅರಣ್ಯ ಭೂಮಿ ಒತ್ತುವರಿಯನ್ನು ಕಟ್ಟುನಿಟ್ಟಾಗಿ ತೆರವುಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಖಂಡ್ರೆ ಅರಣ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ, ಕಳೆದ ಎರಡು ವರ್ಷಗಳಲ್ಲಿ ಬೆಂಗಳೂರಿನಲ್ಲಿ 128 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ.

"ಇಂದು ತೆರವುಗೊಳಿಸಿದ 120 ಎಕರೆಯೊಂದಿಗೆ, ಒಟ್ಟು 248 ಎಕರೆ ಅರಣ್ಯ ಭೂಮಿಯನ್ನು ಈಗ ಮರಳಿ ಪಡೆಯಲಾಗಿದೆ. ಇದು ಅಂದಾಜು ಮಾರುಕಟ್ಟೆ ಮೌಲ್ಯ 8,000 ಕೋಟಿ ರೂ.ಗಳನ್ನು ಮೀರಿದೆ" ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com