ಪರಿಶಿಷ್ಟ ಜಾತಿ ಒಳ ಮೀಸಲಾತಿ: ಸಮೀಕ್ಷೆಯ ಅವಧಿ ಜೂನ್ 30 ರವರೆಗೆ ವಿಸ್ತರಣೆ

ಈಗಾಗಲೇ ಜೂ.22ವರೆಗೆ ರಾಜ್ಯಾದ್ಯಂತ ನಡೆಸಲಾದ ಸಮೀಕ್ಷೆಯಲ್ಲಿ ಶೇ.91ಷ್ಟು ಪ್ರಗತಿಯನ್ನು ಸಾಧಿಸಲಾಗಿದೆ. ಉಳಿದಂತೆ ಸುಮಾರು ಶೇ.9ಷ್ಟು ಪ್ರಗತಿಯನ್ನು ಸಾಧಿಸಬೇಕಾಗಿದೆ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ನಿವೃತ್ತ ನ್ಯಾ. ಎಚ್.ಎನ್.ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ನೇತೃತ್ವದಲ್ಲಿ ನಡೆಯುತ್ತಿರುವ ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ.

ಈಗಾಗಲೇ ಜೂ.22ವರೆಗೆ ರಾಜ್ಯಾದ್ಯಂತ ನಡೆಸಲಾದ ಸಮೀಕ್ಷೆಯಲ್ಲಿ ಶೇ.91ಷ್ಟು ಪ್ರಗತಿಯನ್ನು ಸಾಧಿಸಲಾಗಿದೆ. ಉಳಿದಂತೆ ಸುಮಾರು ಶೇ.9ಷ್ಟು ಪ್ರಗತಿಯನ್ನು ಸಾಧಿಸಬೇಕಾಗಿದೆ. ಆದ್ದರಿಂದ ಸಮೀಕ್ಷೆಯ ಅವಧಿಯನ್ನು ಜೂ.30ವರೆಗೆ ವಿಸ್ತರಣೆ ಮಾಡಲಾಗಿದೆ.

ಬಿಬಿಎಂಪಿ ಸೇರಿ ಬೆಂಗಳೂರು ಸುತ್ತಲಿನ ಜಿಲ್ಲೆಗಳಲ್ಲಿರುವ ಪರಿಶಿಷ್ಟ ಸಮುದಾಯದ ಕುಟುಂಬಗಳು ಸಮೀಕ್ಷೆಯಲ್ಲಿ ಒಳಗೊಂಡಿರದ ಹಿನ್ನೆಲೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಲು ನ್ಯಾಯಮೂರ್ತಿ ಡಾ| ಎಚ್. ಎನ್.ನಾಗಮೋಹನದಾಸ್ ನೇತೃತ್ವದ ಏಕ ಸದಸ್ಯ ಆಯೋಗ ಸಮೀಕ್ಷೆ ಅವಧಿಯನ್ನು ವಿಸ್ತರಿಸಿದೆ.

ಏ.5ರಿಂದ ಸಮೀಕ್ಷೆ ಆರಂಭವಾಗಿದ್ದು, ಜೂ.22ರವರೆಗೆ 1,0628,325 ಕೋಟಿ ಜನರ ಮಾಹಿತಿ (ಶೇ. 91) ದಾಖಲಾಗಿದೆ. ಐದಾರು ಜಿಲ್ಲೆಗಳನ್ನು ಹೊರತು ಪಡಿಸಿದರೆ ಉಳಿದ ಕಡೆ ಶೇ.100ಕ್ಕಿಂತ ಹೆಚ್ಚು ಸಮೀಕ್ಷೆಯಾಗಿದೆ.

File photo
ಪರಿಶಿಷ್ಟ ಜಾತಿ ಸಮೀಕ್ಷೆ: ಶೇ.100 ರಷ್ಟು ಪ್ರಗತಿ ಸಾಧಿಸಲು ಮನೆ ಮನೆಗೆ ಸ್ಟಿಕರ್ ಅಂಟಿಸಿ; ಅಧಿಕಾರಿಗಳಿಗೆ ಸುರಾಳ್ಕರ್ ವಿಕಾಸ್ ಸೂಚನೆ

ಬಿಬಿಎಂಪಿಯ ವ್ಯಾಪ್ತಿಯಲ್ಲಿ ಅಂದಾಜು 13.62 ಲಕ್ಷ ಪರಿಶಿಷ್ಟ ಜಾತಿ ಸಮುದಾಯ ಇರಬಹುದೆಂದು ಅಂದಾಜಿಸಲಾಗಿತ್ತು. ಆದರೆ, ಈವರೆಗೆ ಕೇವಲ 6.70 ಲಕ್ಷ ಜನರ ಮಾಹಿತಿ ಮಾತ್ರ ಲಭ್ಯವಾಗಿದೆ. ಅದೇ ರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2.50 ಲಕ್ಷ ಜನ ಇರಬಹುದೆಂದು ಅಂದಾಜಿಸಿತ್ತು. ಆದರೆ, 2.25 ಜನರು ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಕೋಲಾರದಲ್ಲಿ ಅಂದಾಜು 4.93 ಲಕ್ಷ ಜನರ ಪೈಕಿ 4.60 ಲಕ್ಷ ಜನ ಸಮೀಕ್ಷೆಯಲ್ಲಿ ದಾಖಲಾಗಿದ್ದಾರೆ.

ಆನ್‌ಲೈನ್‌ ಮೂಲಕ ಕುಟುಂಬದ ಸದಸ್ಯರ ವಿವರಗಳನ್ನು ದಾಖಲಿಸುವ ಸೌಲಭ್ಯವನ್ನು ಬಳಸಿಕೊಂಡು ಸುಮಾರು ಆರು ಸಾವಿರ ಕುಟುಂಬಗಳು ಸಮೀಕ್ಷೆಯಲ್ಲಿ ಭಾಗಿಯಾಗಿವೆ. ಸುಮಾರು 25 ಸಾವಿರ ಜನರ ವಿವರಗಳು ದಾಖಲಾಗಿರಬಹುದೆಂದು ಎಂದು ಮೂಲಗಳು ತಿಳಿಸಿವೆ.

ಸ್ಟಿಕರ್ ಅಂಟಿಸುವಂತೆ ಬಿಬಿಎಂಪಿ ಸೂಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಿತಿಯೊಳಗಿನ ಸಮೀಕ್ಷಾ ಕಾರ್ಯ ಶೇ.100ರಷ್ಟು ಖಚಿತಪಡಿಸಲು ಸಮೀಕ್ಷೆ ನಡೆಸಿದ ಪ್ರತೀ ಮನೆಗೆ ಸ್ಟಿಕ್ಕರ್‌ಗಳನ್ನು ಅಂಟಿಸಲು ಪ್ರಾರಂಭಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಅಧಿಕಾರಿಗಳಿಗೆ ಭಾನುವಾರ ಸೂಚನೆ ನೀಡಿದ್ದಾರೆ.

ಸಮೀಕ್ಷೆ ನಡೆಸಿರುವ ಗಣತಿದಾರರು ಮನೆಗೆ ಭೇಟಿ ನೀಡಿದ್ದಾರೆ ಮತ್ತು ಕುಟುಂಬವು ಸಮೀಕ್ಷೆಯಲ್ಲಿ ಭಾಗವಹಿಸಿದೆ ಎಂದು ಈ ಸ್ಟಿಕ್ಕರ್‌ಗಳು ಖಚಿತಪಡಿಸುತ್ತವೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com