Bengaluru Sexual Assault: ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ

ಬೆಂಗಳೂರಿನ ಆನೇಕಲ್ ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದ್ದ ಯುವತಿ ಮೇಲಿನ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬನ್ನೇರುಘಟ್ಟ ಪೊಲೀಸರು ಒಟ್ಟು ಐದು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
Ganja Gang Sexual Assault, Attack Young Woman
ಯುವತಿ ಮೇಲೆ ಪುಂಡರ ಗ್ಯಾಂಗ್ ಲೈಂಗಿಕ ದೌರ್ಜನ್ಯ
Updated on

ಬೆಂಗಳೂರು: ದಿನಸಿ ತರಲು ಹೋದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಪುಂಡರ ಗ್ಯಾಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದು, 5 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂತೆಯೇ ಪುಂಡರ ಪೈಶಾಚಿಕತೆಯ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ.

ಬೆಂಗಳೂರಿನ ಆನೇಕಲ್ ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದ್ದ ಯುವತಿ ಮೇಲಿನ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬನ್ನೇರುಘಟ್ಟ ಪೊಲೀಸರು ಒಟ್ಟು ಐದು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತರನ್ನು ಜಾನ್ ರಿಚರ್ಡ್, ಪುನೀತ್, ಅನುಷ್ ಮದನ್, ಅರುಣ್ ಎಂದು ಗುರುತಿಸಲಾಗಿದೆ.

ಅಂತೆಯೇ ಈ ಗಲಾಟೆ ಪ್ರಕರಣದಲ್ಲಿ ಯುವತಿ ನೆರವಿಗೆ ಬಂದಿದ್ದ ವ್ಯಕ್ತಿಯ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ. ಪೊಲೀಸರು ಆರೋಪಿಗಳಲ್ಲಿ ಒಬ್ಬರು ನೀಡಿರುವ ದೂರನ್ನು ಆಧರಿಸಿ ಯುವತಿಯನ್ನು ರಕ್ಷಿಸಿದ ಸ್ಕೂಟರ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

Ganja Gang Sexual Assault, Attack Young Woman
Bengaluru Molestation case: ಗಾಂಜಾ ಮತ್ತಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ; ಪುಂಡರ ಪೈಶಾಚಿಕ ಕೃತ್ಯ CCTVಯಲ್ಲಿ ಸೆರೆ!

ಏನಿದು ಘಟನೆ?

ಬೆಂಗಳೂರಿನ ಆನೇಕಲ್ ತಾಲೂಕಿನ ರೇಣುಕಾ ಯಲ್ಲಮ್ಮ ಬಡಾವಣೆ ನಿವಾಸಿಯಾಗಿರುವ ಯುವತಿ ಜೂನ್ 22ರಂದು ಅಂದರೆ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ದಿನಸಿ ತರಲು ಅಂಗಡಿಗೆ ಹೊರಟಿದ್ದಳು. ಈ ವೇಳೆ ಐದಾರು ಜನರು ಯುವಕರು ನಡುರಸ್ತೆಯಲ್ಲಿ ಯುವತಿಯನ್ನು ಅಡ್ಡ ಹಾಕಿದ್ದಾರೆ. ಬಳಿಕ, ಓರ್ವ ಯುವಕ ಯುವತಿಯ ಮೈಕೈ ಮುಟ್ಟಿ ಎಳೆದಾಡಿದ್ದಾರೆ. ಇದಕ್ಕೆ ಯುವತಿ ಪ್ರತಿರೋಧ ತೋರಿದ್ದಾಳೆ. ಆಗ, ಓರ್ವ ಯುವಕ ಯುವತಿ ಮೇಲೆ ಹಲ್ಲೆ ಮಾಡಿದ್ದಾನೆ.

ಯುವತಿ ನೆರವಿಗೆ ಬಂಧ ಸ್ಥಳೀಯರ ಮೇಲೂ ಹಲ್ಲೆ

ಈ ವೇಳೆ ಸ್ಥಳೀಯರು ಯುವತಿಯ ನೆರವಿಗೆ ಧಾವಿಸಿದ್ದಾರೆ. ನೆರವಿಗೆ ಧಾವಿಸಿದ ಸ್ಥಳೀಯರ ಮೇಲೂ ಯುವಕರು ಹಲ್ಲೆ ಮಾಡಿದ್ದಾರೆ. ಯುವತಿಯನ್ನು ಬಚಾವ್​ ಮಾಡಿ ಸ್ಥಳೀಯರು ಮನೆ ಬಳಿ ಕರೆದುಕೊಂಡು ಬಂದರೂ ಬಿಡದ ಯುವಕರು, ಆಕೆಯ ಮನೆ ಬಳಿ ಬಂದು ಗಲಾಟೆ ಮಾಡಿದ್ದಾರೆ.

ಪುಂಡರ ಹಾವಳಿಯ ಮತ್ತೊಂದು ವಿಡಿಯೋ ವೈರಲ್

ಇನ್ನು ಯುವತಿ ಮೇಲೆ ಪುಂಡರು ನಡೆಸಿದ ದೌರ್ಜನ್ಯದ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ. ಮನೆಯ ಕಾಪೌಂಡ್ ಒಳಗೆ ಬರಲು ಪುಂಡರು ಯತ್ನಿಸಿದ ವಿಡಿಯೋವನ್ನು ಸ್ಥಳೀಯರು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ.

ಯುವತಿ ಮೇಲೆ ಪುಂಡರು ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬನ್ನೇರುಘಟ್ಟ ‌ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com