'ಸಿದ್ರಾಮಣ್ಣತ್ರ ದುಡ್ಡಿಲ್ಲ ಈಗ, ಇರೋ ದುಡ್ಡಲ್ಲಿ ನಿಮ್ಗೆ ಅಕ್ಕಿ, ಬೇಳೆ ಎಣ್ಣೆ ಕೊಟ್ಬಿಟ್ಟಿದ್ದೀವಿ': ಪರಮೇಶ್ವರ್ ವಿಡಿಯೊ ವೈರಲ್

ಬಾಗಲಕೋಟೆಯಲ್ಲಿ ನಿನ್ನೆ ಮಾತನಾಡಿದ್ದ ಗೃಹ ಸಚಿವರು, ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ದ ಮಾಡಿ ಎಂದರು.
Dr G Parameshwar speaks at Badami
ಬಾದಾಮಿಯಲ್ಲಿ ಮಾತನಾಡಿದ ಡಾ ಜಿ ಪರಮೇಶ್ವರ್
Updated on

ಬಾಗಲಕೋಟೆ: ಗೃಹ ಸಚಿವ ಡಾ. ಜಿ ಪರಮೇಶ್ವರ, ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಹೇಳಿರುವ ಮಾತುಗಳು ವ್ಯಾಪಕವಾಗಿ ವೈರಲ್ ಆಗಿದೆ. ಒಂದೆಡೆ ವಸತಿ ಯೋಜನೆಯಲ್ಲಿ ಅಕ್ರಮದ ಬಗ್ಗೆ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಆರೋಪ ಮಾಡಿದ್ದರೆ, ಮತ್ತೊಂದೆಡೆ ಅನುದಾನ ವಿಚಾರವಾಗಿ ಶಾಸಕ ರಾಜು ಕಾಗೆ ಅಸಮಧಾನ ವ್ಯಕ್ತಪಡಿಸಿರುವುದು ಸರ್ಕಾರದ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ.

ಬಾಗಲಕೋಟೆಯಲ್ಲಿ ನಿನ್ನೆ ಮಾತನಾಡಿದ್ದ ಗೃಹ ಸಚಿವರು, ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ದ ಮಾಡಿ. ಅದು ಎಷ್ಟು ಮೊತ್ತದ್ದಾದರೂ ಪರವಾಗಿಲ್ಲ. ಅದು ಸಾವಿರ ಕೋಟಿ ಪ್ರಾಜೆಕ್ಟ್ ಆಗಿರಲಿ. ಪ್ರಸ್ತಾವನೆ ಸಿದ್ಧ ಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಯಾಕೆಂದರೆ, ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ ಎಂದು ಹೇಳಿದ್ದಾರೆ.

ನಮ್ಮ ಬಳಿ ಇರುವ ದುಡ್ಡಿನಲ್ಲಿ ನಿಮಗೆ ಈಗಾಗಲೇ ಅಕ್ಕಿ, ಬೇಳೆ, ಎಣ್ಣೆ ಕೊಟ್ಟಿದ್ದೇವೆ ಎಂದು ಹೇಳಿದಾಗ ವೇದಿಕೆ ಮೇಲಿದ್ದವರೆಲ್ಲ ನಕ್ಕರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com