
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಪೊಲೀಸರು ಬುಧವಾರ ದಾಳಿ ನಡೆಸಿದ್ದು, ಕೋಲ್ಕತ್ತಾ ಮೂಲದ ಓರ್ವ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.
ನಾಯ್ಕ್ ರೆಸಿಡೆನ್ಸಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ಸಿಪಿಐ ಸಂತೋಷ ಕಾಯ್ಕಿಣಿ ಅವರ ನೇತೃತ್ವದಲ್ಲಿ ಪಿ.ಎಸ್.ಐ. ಹಣಮಂತ ಬೀರಾದಾರ ಅವರು ಇಂದು ದಾಳಿ ನಡೆಸಿ, ಕೋಲ್ಕತ್ತ ಮೂಲದ ಮಹಿಳೆಯೊಬ್ಬರನ್ನು ರಕ್ಷಿಸಿದ್ದಾರೆ.
ರೆಸಿಡೆನ್ಸಿ ಮಾಲೀಕ ವಿನಾಯಕ್ ನಾಯ್ಕ್, ಸಿದ್ದಾಪುರದ ಗಣೇಶ್ ನಾಯ್ಕ್, ಆಕಾಶ್ ಮತ್ತು ಅನಿಲ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲ್ಕತ್ತಾ ಮೂಲದ ಮಹಿಳೆಗೆ ಹಣದ ಆಮಿಷ ತೋರಿಸಿ ಬೆಂಗಳೂರಿನಿಂದ ಕರೆತಂದು ಲಾಡ್ಜ್ ನಲ್ಲಿಟ್ಟು ನಡೆಸಲಾಗುತ್ತಿತ್ತು ಎನ್ನಲಾಗಿದ್ದು, ಈಗ ಮಹಿಳೆಯನ್ನು ರಕ್ಷಿಸಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement