ಎಲ್ಲಾ ಇಲಾಖೆಗಳಲ್ಲೂ ಕನ್ನಡ ಬಳಕೆ ಕಡ್ಡಾಯ, ತಪ್ಪಿದರೆ ಶಿಸ್ತು ಕ್ರಮ: ರಾಜ್ಯ ಸರ್ಕಾರ ಆದೇಶ

ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನ ಸೆಳೆಯುವ ಸೂಚನೆ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಬೇಕು.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳ ಆಡಳಿತದಲ್ಲಿ ಕಡ್ಡಾಯವಾಗಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಕೆ ಮಾಡಬೇಕು. ಸೂಚನೆ ಪಾಲಿಸದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾವ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಆಡಳಿತ ನಡೆಸುವಂತೆ ಹಲವು ಬಾರಿ ಸುತ್ತೋಲೆ ಹೊರಡಿಸಿ ಸೂಚಿಸಿದ್ದರೂ ಪಾಲನೆಯಾಗುತ್ತಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ವರದಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಸಂಪೂರ್ಣ ಕನ್ನಡ ಬಳಕೆ ನಿಯಮ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಸರ್ಕಾರಿ ಕಚೇರಿಗಳ ನಾಮಫಲಕಗಳನ್ನು ಕನ್ನಡ ದಲ್ಲಿಯೇ ಪ್ರದರ್ಶಿಸಬೇಕು. ಈ ಸೂಚನೆ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನ ಸೆಳೆಯುವ ಸೂಚನೆ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಬೇಕು. ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರೆ ಎಲ್ಲಾ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸುವಂತೆ ಸೂಚಿಸಿದ್ದಾರೆ.

ಕಚೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡಬೇಕು. ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲಿಯೇ ಇರಬೇಕು. ಕೇಂದ್ರ ಸರ್ಕಾರ, ಹೊರರಾಜ್ಯಗಳು ಮತ್ತು ನ್ಯಾಯಾಲಯಗಳ ವ್ಯವಹಾರಗಳನ್ನು ಹೊರತುಪಡಿಸಿ ಉಳಿದೆಲ್ಲಾ ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು. ಆಡಳಿತದಲ್ಲಿ ಭಾಷಾ ನೀತಿಯನ್ನು ಪೂರ್ಣ ಪ್ರಮಾಣದಲ್ಲಿ ಹಾಗೂ ಎಲ್ಲಾ ಹಂತಗಳಲ್ಲಿ ಜಾರಿಗೊಳಿಸುವುದು ಎಲ್ಲ ಅಧಿಕಾರಿಗಳ ನೌಕರರ ಕರ್ತವ್ಯ ಎಂದು ನಿರ್ದೇಶಿಸಲಾಗಿದೆ.

CM Siddaramaiah
ಜಾತಿ ಗಣತಿ ಮರು ಸಮೀಕ್ಷೆ ಬದಲು ಕನ್ನಡ ಭಾಷಿಕರ ಸಮೀಕ್ಷೆ ನಡೆಸಿ: ಸರ್ಕಾರಕ್ಕೆ ವಾಟಾಳ್ ನಾಗರಾಜ್ ಆಗ್ರಹ

ಈಗಾಗಲೇ ಸರ್ಕಾರ ನೀಡಿರುವ ಆದೇಶಗಳನ್ನು ಸರ್ಕಾರ, ನಿಗಮ, ಮಂಡಳಿ, ವಿಶ್ವವಿದ್ಯಾಲಯಗಳು, ಕಚೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ಸ್ಥಳೀಯ ಸಂಸ್ಥೆಗಳು, ಅನುದಾನಿತ ಸಂಘ ನಮೂನೆ,ದಾಖಲೆ ಪುಸ್ತಕ ಮುಂತಾದವುಗಳನ್ನು ಸಂಸ್ಥೆಗಳು, ಅಧಿಕಾರಿ, ನೌಕರರು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ತಿಳಿಸಿದ್ದಾರೆ.

ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರೆ ಎಲ್ಲಾ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸುವಂತೆ ಸೂಚಿಸಿದ್ದಾರೆ.

ಕಚೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡಬೇಕು. ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲಿಯೇ ಇರಬೇಕು. ಕೇಂದ್ರ ಸರ್ಕಾರ, ಹೊರರಾಜ್ಯಗಳು ಮತ್ತು ನ್ಯಾಯಾಲಯಗಳ ವ್ಯವಹಾರಗಳನ್ನು ಹೊರತುಪಡಿಸಿ ಉಳಿದೆಲ್ಲಾ ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು. ಆಡಳಿತದಲ್ಲಿ ಭಾಷಾ ನೀತಿಯನ್ನು ಪೂರ್ಣ ಪ್ರಮಾಣದಲ್ಲಿ ಹಾಗೂ ಎಲ್ಲಾ ಹಂತಗಳಲ್ಲಿ ಜಾರಿಗೊಳಿಸುವುದು ಎಲ್ಲ ಅಧಿಕಾರಿಗಳ ನೌಕರರ ಕರ್ತವ್ಯ ಎಂದು ನಿರ್ದೇಶಿಸಲಾಗಿದೆ.

ಈಗಾಗಲೇ ಸರ್ಕಾರ ನೀಡಿರುವ ಆದೇಶಗಳನ್ನು ಸರ್ಕಾರ, ನಿಗಮ, ಮಂಡಳಿ, ವಿಶ್ವವಿದ್ಯಾಲಯಗಳು, ಕಚೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ಸ್ಥಳೀಯ ಸಂಸ್ಥೆಗಳು, ಅನುದಾನಿತ ಸಂಘ ನಮೂನೆ,ದಾಖಲೆ ಪುಸ್ತಕ ಮುಂತಾದವುಗಳನ್ನು ಸಂಸ್ಥೆಗಳು, ಅಧಿಕಾರಿ, ನೌಕರರು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com