
ಕೋಲಾರ: ಹಾಡಹಗಲೇ ಮಹಿಳೆಯನ್ನು ಅಟ್ಟಾಡಿಸಿದ ದುಷ್ಕರ್ಮಿಗಳು ಸರಗಳ್ಳತನಕ್ಕೆ ಯತ್ನಿಸಿರುವ ಘಟನೆ ಮುಳಬಾಗಿಲಿನ ಸಂಜಪ್ಪ ಬಡಾವಣೆಯಲ್ಲಿ ನಡೆದಿದೆ.
ಖಾಲಿ ನಿವೇಶನವೊಂದರ ಬಳಿ ಮಹಿಳೆ ಸ್ಕೂಟಿ ನಿಲ್ಲಿಸುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಓರ್ವ ಬೈಕ್ ಮೇಲೆ ಕುಳಿತಿದ್ದರೆ, ಮತ್ತೋರ್ವ ಮಹಿಳೆಯನ್ನು ಅಟ್ಟಾಡಿಸಿದ್ದು, ಕುತ್ತಿಗೆಗೆ ಹಾಕಿ ಸರ ದೋಚಲು ಯತ್ನಿಸಿದ್ದಾನೆ.
ನಂತರ ಮಹಿಳೆ ಕಿರುಚಲು ಪ್ರಾರಂಭಿಸಿದ್ದಾಗ, ಅಕ್ಕಪಕ್ಕದವರು ಸ್ಥಳಕ್ಕೆ ಧಾವಿಸುತ್ತಿದ್ದಂತೆಯೇ ಆರೋಪಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಈ ಭಯಾನಕ ಕೃತ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತನಿಖಾಧಿಕಾರಿಗಳು ಹಂಚಿಕೊಳ್ಳುತ್ತಿದ್ದಾರೆ.
ಈ ಸಂಬಂಧ ದರೋಡೆಗೆ ಯತ್ನಕ್ಕೆ ಸಂಬಂಧಿಸಿದ ಸೆಕ್ಷನ್ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಗಳ ಸುಳಿವಿಗಾಗಿ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲಾಗುತ್ತಿದೆ. ಇಲ್ಲಿಯವರೆಗೂ ಯಾರನ್ನೂ ಬಂಧಿಸಿಲ್ಲ. ಆದರೆ, ದುಷ್ಕರ್ಮಿಗಳ ಬಂಧನಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಕೋಲಾರದ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ತಿಳಿಸಿದ್ದಾರೆ.
Advertisement