
ಬಳ್ಳಾರಿ: ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ.
ಬಳ್ಳಾರಿಯಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಷಿ, ಬಳ್ಳಾರಿಯಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದರು.
ಇದರೊಂದಿಗೆ ದೀಪ ಬಾಸ್ತಿ ಅವರನ್ನು ಸಮ್ಮೇಳನದಲ್ಲಿ ಗೌರವಿಸಲಾಗುತ್ತದೆ ಎಂದರು.
ಜೂ. 29ರಂದು ಬಳ್ಳಾರಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಬಾನು ಮುಷ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಜೋಶಿ ತಿಳಿಸಿದರು.
Advertisement