ಮಂಗಳೂರು: BJP ಮುಖಂಡನ ಪುತ್ರನಿಂದ ವಿದ್ಯಾರ್ಥಿನಿ ಗರ್ಭವತಿ ಪ್ರಕರಣ; ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ!

ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ರಾವ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
Representation purpose only
ಸಂಗ್ರಹ ಚಿತ್ರ
Updated on

ಮಂಗಳೂರು: ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ರಾವ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ತನ್ನ ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ ಆರೋಪಿ ಕೃಷ್ಣ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದನು. ಆಕೆ ಗರ್ಭಿಣಿ ಆಗಿರುವ ವಿಚಾರ ತಿಳಿದ ಕೂಡಲೇ ಕೃಷ್ಣ ಮದುವೆಯಾಗಲು ನಿರಾಕರಿಸಿದ್ದಾನೆ. ಈ ಸಂಬಂಧ ಇದೀಗ ಯುವತಿ, ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದು, ಈ ದೂರು ದಾಖಲಿಸಿಕೊಂಡಿರುವ ಪೊಲೀಸರು ಶ್ರೀಕೃಷ್ಣನ ಪತ್ತೆಗೆ ಬಲೆ ಬೀಸಿದ್ದಾರೆ.

ಸಂತ್ರಸ್ತ ಯುವತಿ ಹಾಗೂ ಆರೋಪಿ ಕೃಷ್ಣ ಪುತ್ತೂರಿನಲ್ಲಿ ಹೈಸ್ಕೂಲ್‌ನಲ್ಲಿ ಓದುವಾಗ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ಇಬ್ಬರೂ ಮಂಗಳೂರಿನ ಖಾಸಗಿ ಕಾಲೇಜಿಗೆ ಸೇರಿಕೊಂಡಿದ್ದರು. 2024ರ ಅಕ್ಟೋಬರ್‌ 11ರಂದು ಶ್ರೀಕೃಷ್ಣ ಮನೆಯಲ್ಲಿ ಯಾರೂ ಇಲ್ಲದಾಗ ಯುವತಿಯನ್ನು ಮನೆಗೆ ಕರೆಸಿಕೊಂಡು ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ನಂತರ 2025ರ ಜನವರಿ ತಿಂಗಳಿನಲ್ಲಿ ಮತ್ತೆ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದನು. ತಾನು ಗರ್ಭೀಣಿ ಆಗಿರುವ ವಿಚಾರವನ್ನು ಯುವತಿ ಕೃಷ್ಣ ರಾವ್ ಗೆ ತಿಳಿಸಿದ್ದಾಳೆ. ಆಗಲೂ ಮದುವೆ ಆಗಲು ಕೃಷ್ಣ ರಾವ್ ನಿರಾಕರಿಸಿದ್ದಾನೆ.

Representation purpose only
ಕೊಪ್ಪಳ: ಒಂದೇ ತಟ್ಟೆಯಲ್ಲಿ ತಿಂದು ಬೆಳೆದವ ಪತ್ನಿ ಜೊತೆ ಚಕ್ಕಂದ; ನಡು ರಸ್ತೆಯಲ್ಲಿ ಗೆಳೆಯನನ್ನು ಕೊಚ್ಚಿ ಕೊಂದ ವ್ಯಕ್ತಿ!

ಇದರಿಂದ ನೊಂದ ಯುವತಿ ಜೂನ್ 24ರಂದು ರಾತ್ರಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿರುವ ವಿಚಾರ ತಿಳಿಯುತ್ತಿದ್ದಂತೆ ಆರೋಪಿ ಕೃಷ್ಣ ರಾವ್ ತಲೆ ಮರೆಸಿಕೊಂಡಿದ್ದಾನೆ. ಸದ್ಯ ಪೊಲೀಸರು ಆತನ ಪತ್ತೆಗಾಗಿ ಬಲೆ ಬೀಸಿದ್ದಾರೆ. ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ 64(1) ಹಾಗೂ 69ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ತಲೆಮರೆಸಿಕೊಂಡಿರುವ ಆರೋಪಿ ಕೃಷ್ಣ ರಾವ್ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com