
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನ ಕೂರತ್ ತಂಙಳ್ ಉರೂಸ್ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಣಿಯೂರಿನ ಕೂರತ್ ತಂಙಳ್ ಉರೂಸ್ ಕಾರ್ಯಕ್ರಮ ಜೂನ್ 26ರಿಂದ 29ರವರೆಗೆ ಆಯೋಜಿಸಲಾಗಿತ್ತು. ಉರೂಸ್ ಮುಬಾರಕ್‌ನ ಕೊನೆಯ ದಿನವಾದ ಇಂದು ನಿರೀಕ್ಷೆಗೂ ಮೀರಿ ಜನರು ಸೇರಿದ್ದರು. ಸುಮಾರು 30-40 ಸಾವಿರ ಮಂದಿ ಆಗಮಿಸುವ ನಿರೀಕ್ಷೆಯಿತ್ತು. ಆದರೆ ಒಂದು ಲಕ್ಷಕ್ಕೂ ಅಧಿಕ ಜನ ಸೇರಿದ್ದರಿಂದ ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥಗೊಂಡಿದ್ದಾರೆ.
Advertisement