
ಬೆಂಗಳೂರು: ಬಿಬಿಎಂಪಿ ಕಸದ ಲಾರಿಯಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಲಿವಿಂಗ್ ಟುಗೆದರ್ ನಲ್ಲಿದ್ದ ಮುಸ್ಲಿಂ ವ್ಯಕ್ತಿ ಹತ್ಯೆ ಮಾಡಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಮಹಿಳೆಯನ್ನು ಆಶಾ ಎಂದು ಗುರುತಿಸಲಾಗಿದೆ. ಆಕೆಯ ಜೊತೆಗೆ ಲಿವಿಂಗ್ ಟುಗೆದರ್ ನಲ್ಲಿದ್ದ ವ್ಯಕ್ತಿಯೇ ಕೊಲೆ ಮಾಡಿರುವ ವಿಚಾರ ತಿಳಿದುಬಂದಿದ್ದು, ಆರೋಪಿ ಮೊಹಮ್ಮದ್ ಸಂಶುದ್ದೀನ್ ನನ್ನು ಪೊಲೀಸರು ಈಗ ಬಂಧಿಸಿದ್ದಾರೆ.
ಬೆಂಗಳೂರಿನ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ಶನಿವಾರ ತಡರಾತ್ರಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿ ಶವ ಪತ್ತೆಯಾಗಿತ್ತು. ಸ್ಥಳೀಯ ವ್ಯಕ್ತಿಯೊಬ್ಬರು ಕಸ ಹಾಕಲು ಬಂದಿದ್ದಾಗ ಕಸದ ಲಾರಿಯಲ್ಲಿ ಯುವತಿಯ ತಲೆ ಕೂದಲು ಕಾಣಿಸಿತ್ತು. ಅವರು ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ಶವವೊಂದು ಮೂಟೆಕಟ್ಟಿ ಎಸೆದ ಸ್ಥಿತಿಯಲ್ಲಿರುವುದನ್ನು ಕಂಡಿದ್ದಾರೆ. ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು, ಹಂತಕನಿಗೆ ಶೋಧ ನಡೆಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರ ಕೈಗೆ ಹಂತಕ ಸಿಕ್ಕಿಬಿದ್ದಿದ್ದು, ಕೊಲೆ ರಹಸ್ಯ ಬಯಲಾಗಿದೆ.
ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸ: ಆರೋಪಿ ಅಸ್ಸಾಂನ 33 ವರ್ಷದ ಮೊಹಮ್ಮದ್ ಸಂಶುದ್ದೀನ್ , ಸುಮಾರು ಒಂದೂವರೆ ವರ್ಷಗಳಿಂದ 40 ವರ್ಷದ ಆಶಾ ಜೊತೆಗೆ ಸಂಬಂಧ ಹೊಂದಿದ್ದ ಆರೋಪಿ ಹುಳಿಮಾವಿನ ಬಾಡಿಗೆ ಮನೆಯೊಂದರಲ್ಲಿ ಒಟ್ಟಿಗೆ ವಾಸಿಸುತ್ತಿದ್ದ ಎನ್ನಲಾಗಿದೆ. ಆರೋಪಿ ಹಾಗೂ ಮೃತಪಟ್ಟಿ ಮಹಿಳೆಗೆ ಈ ಹಿಂದೆ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದರೂ ಆದರೂ ಅವರು ಗಂಡ- ಹೆಂಡತಿ ರೀತಿ ವಾಸಿಸುತ್ತಿದ್ದರು. ವಿಧವೆಯಾಗಿದ್ದ ಆಶಾ, ನಗರದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಮೊಹಮ್ಮದ್ ಸಂಶುದ್ದೀನ್ ನ ಪತ್ನಿ ಹಾಗೂ ಇಬ್ಬರು ಮಕ್ಕಳು ಅಸ್ಸಾಂನಲ್ಲಿಯೇ ಇದ್ದಾರೆ. ಇಬ್ಬರ ನಡುವೆ ಉಂಟಾದ ಜಗಳ ದೈಹಿಕ ಹಲ್ಲೆಗೆ ತಿರುಗಿದ್ದು, ಆಶಾ ಸಾವಿನಲ್ಲಿ ಅಂತ್ಯವಾಗಿದೆ. ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಸಂಶುದ್ದೀನ್ ಒಪ್ಪಿಕೊಂಡಿದ್ದಾನೆ ಎಂದು ಬೆಂಗಳೂರು ದಕ್ಷಿಣ DCP ಲೋಕೇಶ್ ಬಿ. ಲೋಕೇಶ್ ಬಿ ಜಗಲಾಸರ್ ತಿಳಿಸಿದ್ದಾರೆ.
ಶವವನ್ನು ಬೈಕ್ ನಲ್ಲಿ ತಂದು ಕಸದ ಲಾರಿಗೆ ಹಾಕಿದ್ದ ಆರೋಪಿ: ಆಶಾ ಅವರನ್ನು ಕೊಲೆ ಮಾಡಿದ ನಂತರ ಆರೋಪಿ ಸಂಶುದ್ದೀನ್, ಮೃತದೇಹವನ್ನು ಬೈಕ್ ನಲ್ಲಿ ತಂದು ಬಿಬಿಎಂಪಿ ಕಸದ ಲಾರಿಯಲ್ಲಿ ಹಾಕಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಿದ್ದ. ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದಾಗ ಹಂತಕ ಸಿಕ್ಕಿ ಬಿದ್ದಿದ್ದು, ಕೊಲೆ ರಹಸ್ಯ ಬಯಲಾಗಿದೆ.
Advertisement