
ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆಯ ಐದು ಸದಸ್ಯರನ್ನು ಮರಕ್ಕೆ ಕಟ್ಟಿ "ದಾಳಿ" ಥಳಿಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಜೂನ್ 28 ರಂದು ಹುಕ್ಕೇರಿ ತಾಲ್ಲೂಕಿನಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ.
ವಿಡಿಯೋದಲ್ಲಿ ಗ್ರಾಮಸ್ಥರ ಗುಂಪೊಂದು ಐದು ಪುರುಷರನ್ನು ತೆಂಗಿನ ಮರಕ್ಕೆ ಕಟ್ಟಿ ಹಿಗ್ಗಾ-ಮುಗ್ಗಾ ಥಳಿಸಲಾಗುತ್ತಿದೆ.
ಅಕ್ರಮವಾಗಿ ಜಾನುವಾರು ಸಾಗಣೆ ತಡೆಯಲು ಮುಂದಾಗಿದ್ದಕ್ಕೆ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಶ್ರೀರಾಮ ಸೇನೆಯ ಸದಸ್ಯರು ಆರೋಪಿಸಿದ್ದಾರೆ.
ಆದಾಗ್ಯೂ, ಈ ಹಲ್ಲೆ ಜಾನುವಾರು ಸಾಗಣೆಗೆ ಸಂಬಂಧಿಸಿಲ್ಲ ಎಂದು ಗ್ರಾಮಸ್ಥರು ಹೇಳಿದ್ದು, ಶ್ರೀರಾಮ ಸೇನೆ ಕಾರ್ಯಕರ್ತರು "ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದ್ದಾರೆ.
ಪೊಲೀಸರ ಪ್ರಕಾರ, ಜೂನ್ 26 ರಂದು ಶ್ರೀರಾಮ ಸೇನೆಯ ಸದಸ್ಯರು ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದು ಚಾಲಕ ಮತ್ತು ವಾಹನವನ್ನು ಹುಕ್ಕೇರಿ ಪೊಲೀಸ್ ಠಾಣೆಗೆ ಕರೆದೊಯ್ದು, ಜಾನುವಾರುಗಳನ್ನು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದರು.
ಬಳಿಕ ಜಾನುವಾರುಗಳನ್ನು ಗೋಶಾಲೆಗೆ ಸ್ಥಳಾಂತರಿಸಲಾಯಿತು. ಆದರೆ ಅಧಿಕಾರಿಗಳು ಅವುಗಳನ್ನು ಹೈನುಗಾರಿಕೆಗಾಗಿ ಖರೀದಿಸಲಾಗಿದೆ ಎಂದು ದೃಢಪಡಿಸಿದ ನಂತರ ಜೂನ್ 28 ರಂದು ಸ್ಥಳೀಯರಿಗೆ ಜಾನುವಾರುಗಳನ್ನು ಹಿಂತಿರುಗಿಸಲಾಗಿದೆ.
ಆ ದಿನ ಶ್ರೀರಾಮ ಸೇನೆಯ ಸದಸ್ಯರು ಗೋ ಸಾಗಣೆ ತಡೆಯಲು ಗ್ರಾಮಸ್ಥರೊಬ್ಬರ ಮನೆಗೆ ನುಗ್ಗಿ "ಗದ್ದಲ" ಮಾಡಿದ್ದಾರೆ. ಆ ಸಮಯದಲ್ಲಿ, ಮಹಿಳೆಯರು ಮಾತ್ರ ಇದ್ದರು. ಆದರೆ ಅನುಚಿತವಾಗಿ ವರ್ತಿಸಿದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಗೆ ನುಗ್ಗಿದ್ದರಿಂದ ಕೋಪಗೊಂಡ ಗ್ರಾಮಸ್ಥರು ಕಾರ್ಯಕರ್ತರ ಮೇಲೆ "ಹಲ್ಲೆ" ನಡೆಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಎಸ್ ಗುಳೇದ್ ಅವರು ಹೇಳಿದ್ದಾರೆ.
"ಗ್ರಾಮಸ್ಥರ ಈ ಕೃತ್ಯ ಕಾನೂನು ಮತ್ತು ಸುವ್ಯವಸ್ಥೆಯ ಉಲ್ಲಂಘನೆಯಾಗಿದೆ. ಆದಾಗ್ಯೂ, ಬಂಧಿತ ಆರೋಪಿಗಳು ಸಂಪೂರ್ಣವಾಗಿ ನಿರಪರಾಧಿಗಳಲ್ಲ - ಅವರಲ್ಲಿ ಒಬ್ಬ ಜಿಲ್ಲೆಯಿಂದ ಗಡಿಪಾರು ಮಾಡಲ್ಪಟ್ಟ ರೌಡಿ-ಶೀಟರ್" ಇದ್ದಾರೆ ಎಂದು ಅವರು ತಿಳಿಸಿದ್ದಾರೆ.
Advertisement