Bike Taxi ನಿಷೇಧದ ಖುಷಿಯಲ್ಲಿದ್ದ Auto Drivers ಗೆ ಸಾರಿಗೆ ಇಲಾಖೆ ಶಾಕ್: 260 ಕೇಸ್, 100ಕ್ಕೂ ಅಧಿಕ ಆಟೋಗಳು ಸೀಜ್!

ನಿಯಮ ಬಾಹಿರವಾಗಿ ನಡೆದುಕೊಳ್ಳುವ ಆಟೋಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಸಿದ್ದರು.
transport dept cracks down on errant autos in Bengaluru
ಆಟೋ ಚಾಲಕರ ವಿರುದ್ಧ ಸಾರಿಗೆ ಇಲಾಖೆ ಕಾರ್ಯಾಚರಣೆಚಿತ್ರ: ChristinMP_
Updated on

ಬೆಂಗಳೂರು: ಬೈಕ್ ಟ್ಯಾಕ್ಸಿ ನಿಷೇಧದ ಬಳಿಕ ಖುಷಿಯಲ್ಲಿದ್ದ ಆಟೋ ಚಾಲಕರಿಗೆ ಕರ್ನಾಟಕ ಸಾರಿಗೆ ಇಲಾಖೆ ಶಾಕ್ ನೀಡಿದ್ದು, ನಿಯಮ ಉಲ್ಲಂಘಿಸಿದ 100ಕ್ಕೂ ಅಧಿಕ ಆಟೋಗಳನ್ನು ಸೀಜ್ ಮಾಡಿದ್ದಾರೆ.

ಹೌದು.. ಸರ್ಕಾರ ಇತ್ತೀಚೆಗೆ ಕರ್ನಾಟಕದಲ್ಲಿ ರ‍್ಯಾಪಿಡೋ (rapido), ಉಬರ್ ಬೈಕ್ ಟ್ಯಾಕ್ಸಿಯನ್ನ ಬ್ಯಾನ್ ಮಾಡಿತ್ತು. ಇದರ ಬೆನ್ನಲ್ಲೇ ಆಟೋ ಚಾಲಕರು (auto drivers) ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿತ್ತು.

ಇದೇ ವಿಚಾರವಾಗಿ ನಿಯಮ ಬಾಹಿರವಾಗಿ ನಡೆದುಕೊಳ್ಳುವ ಆಟೋಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಸಿದ್ದರು.

ಆದಾಗ್ಯೂ ನಗರದಲ್ಲಿ ನಿಯಮ ಬಾಹಿರವಾಗಿ ಆಟೋಗಳಲ್ಲಿ ಪ್ರಯಾಣಿಕರಿಂದ ದುಬಾರಿ ಹಣ ವಸೂಲಿ ಮಾಡುತ್ತಿದ್ದ ಆಟೋ ಚಾಲಕರ ವಿರುದ್ಧ ಸಾರಿಗೆ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಆಟೋ ಚಾಲಕರಿಗೆ ಆರ್​ಟಿಓ ಅಧಿಕಾರಿಗಳು ಶಾಕ್ ನೀಡಿದ್ದು, ನಿಯಮ ಉಲ್ಲಂಘಿಸಿದ 100ಕ್ಕೂ ಅಧಿಕ ಆಟೋಗಳನ್ನು ಸೀಜ್ ಮಾಡಿದ್ದಾರೆ.

transport dept cracks down on errant autos in Bengaluru
'ನಿಗದಿ ಮಾಡಿರುವ ದರಕ್ಕಿಂತ ಹೆಚ್ಚಿನ ದರ ವಸೂಲಿ ಮಾಡಿದರೆ ಕಠಿಣ ಕ್ರಮ': Autorikshaw ಚಾಲಕರಿಗೆ ಸರ್ಕಾರ ವಾರ್ನಿಂಗ್!

100ಕ್ಕೂ ಅಧಿಕ ಆಟೋಗಳು ಸೀಜ್

ಆಟೋ ಚಾಲಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಿರುವ ಕುರಿತು ದೂರುಗಳು ಬಂದ ಹಿನ್ನೆಲೆ ನಗರದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳಿಂದ ಕಾರ್ಯಾಚರಣೆ ಮಾಡಲಾಗುತ್ತಿದೆ. ಸಾರ್ವಜನಿಕರಿಂದ ಆಟೋ ದರ ಹೆಚ್ಚಳ ವಸೂಲಿ ದೂರು ಬಂದಿತ್ತು. ಹೀಗಾಗಿ ಇಂದು ಆಟೋ ದರ ಪರಿಶೀಲನೆ ಮಾಡಲು ಮುಂದಾಗಿದ್ದೇವೆ. ಬೆಳಗ್ಗೆಯಿಂದ ಈವರೆಗೆ ನಗರದಲ್ಲಿ 100ಕ್ಕೂ ಅಧಿಕ ಆಟೋ ಸೀಜ್ ಮಾಡಲಾಗಿದೆ ಎಂದು ಸಾರಿಗೆ ಇಲಾಖೆ ಜಂಟಿ ಆಯುಕ್ತೆ ಶೋಭಾ ಹೇಳಿದ್ದಾರೆ.

ಅಂತೆಯೇ ದುಪ್ಪಟ್ಟು ದರ ಪರಿಶೀಲನೆ ವೇಳೆ ಇತರೆ ದಾಖಲೆಗಳೂ ಇಲ್ಲದೆ ಇರುವುದು ಗಮನಕ್ಕೆ ಬಂದಿದೆ. 250ಕ್ಕೂ ಅಧಿಕ ದೂರನ್ನು ಆಟೋ ಚಾಲಕರ ಮೇಲೆ ದಾಖಲೆ ಮಾಡಿಕೊಂಡಿದ್ದು, ಅಗ್ರಿಗೇಟರ್ ಕಂಪೆನಿಗಳ ಮೇಲೂ ನಾವು ನಿಗಾ ಇಡುತ್ತಿದ್ದೇವೆ. ಸರ್ಕಾರ ನೀಡಿರುವ ಆಟೋ ದರಕ್ಕೆ 5% ಸರ್ವೀಸ್ ಚಾರ್ಜ್ ಹಾಕಬಹುದು. ಅದು ಬಿಟ್ಟರೆ ದುಪ್ಪಟ್ಟು ದರ ವಿಧಿಸುವ ಅಧಿಕಾರ ಅಗ್ರಿಗೇಟರ್ ಕಂಪೆನಿಗಳಿಗಿಲ್ಲ. ಎಲ್ಲಾ ಕಡೆ ದಾಳಿ ನಡೆಯುತ್ತಿದೆ. ಇದನ್ನು ಹತೋಟಿಗೆ ತರುತ್ತೇವೆ ಎಂದು ಹೇಳಿದರು.

ಸಚಿವ ರಾಮಲಿಂಗಾರೆಡ್ಡಿ ಖಡಕ್​ ಸೂಚನೆ

ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಆ್ಯಪ್ ಆಧಾರಿತ ಮತ್ತು ಇನ್ನಿತರ ಆಟೋ ಚಾಲಕರ ವಿರುದ್ಧ, ಕಾನೂನು ಉಲ್ಲಂಘಿಸುವವರ ವಿರುದ್ಧ ಮತ್ತು ಪ್ರಯಾಣಿಕರಿಂದ ಹಗಲು ದರೋಡೆ ಮಾಡಿದರೆ ಅಂತವರ ಪರ್ಮೀಟ್ ರದ್ದು ಪಡಿಸುವಂತೆ ಸಾರಿಗೆ ಇಲಾಖೆ ಕಮಿಷನರ್​ಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com