ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ

ICAR-IIHR ಗೆ ಡೀಮ್ಡ್ ವಿವಿ ಸ್ಥಾನಮಾನ ನೀಡುವ ಬಗ್ಗೆ ಪ್ರಧಾನ್ ಜತೆ ಚರ್ಚೆ: ಕುಮಾರಸ್ವಾಮಿ

ಐಸಿಎಆರ್-ಐಐಎಚ್‌ಆರ್ ಆಯೋಜಿಸಿದ್ದ ರಾಷ್ಟ್ರೀಯ ತೋಟಗಾರಿಕಾ ಮೇಳ 2025 ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ಕೃಷಿ ಸಂಶೋಧನೆಯಲ್ಲಿ ಸಾಂಸ್ಥಿಕ ಬೆಂಬಲದ ಅಗತ್ಯವನ್ನು ಒತ್ತಿ ಹೇಳಿದರು.
Published on

ಬೆಂಗಳೂರು: ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ(ICAR-IIHR)ಗೆ ಡೀಮ್ಡ್ ವಿಶ್ವವಿದ್ಯಾಲಯ ಸ್ಥಾನಮಾನ ನೀಡುವ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಶೀಘ್ರದಲ್ಲೇ ಚರ್ಚಿಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಶನಿವಾರ ಹೇಳಿದ್ದಾರೆ.

ಐಸಿಎಆರ್-ಐಐಎಚ್‌ಆರ್ ಆಯೋಜಿಸಿದ್ದ ರಾಷ್ಟ್ರೀಯ ತೋಟಗಾರಿಕಾ ಮೇಳ 2025 ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ಕೃಷಿ ಸಂಶೋಧನೆಯಲ್ಲಿ ಸಾಂಸ್ಥಿಕ ಬೆಂಬಲದ ಅಗತ್ಯವನ್ನು ಒತ್ತಿ ಹೇಳಿದರು. ಅಲ್ಲದೆ ಈ ವಿಷಯದ ಬಗ್ಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಚರ್ಚೆ ನಡೆಸುವುದಾಗಿಯೂ ಕುಮಾರಸ್ವಾಮಿ ತಿಳಿಸಿದರು.

"ಕೇಂದ್ರ ಸರ್ಕಾರವು ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸುವ ಗುರಿಯನ್ನು ಹೊಂದಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ 2047 ರ ವಿಕ್ಷಿತ್ ಭಾರತ್ ಮತ್ತು ಆತ್ಮನಿರ್ಭರ್ ಭಾರತ್ ದೃಷ್ಟಿಕೋನದ ಪ್ರಮುಖ ಗುರಿಯಾಗಿದೆ. ಈ ಬದ್ಧತೆಯ ಭಾಗವಾಗಿ 2025-26 ರ ಕೇಂದ್ರ ಬಜೆಟ್ ನಲ್ಲಿ ಕೃಷಿಗೆ 1,52,000 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕೃಷಿ ಸಂಶೋಧನೆ ಮತ್ತು ತಾಂತ್ರಿಕ ಪ್ರಗತಿಯ ಮೇಲೆ ಸರ್ಕಾರದ ಗಮನವನ್ನು ಎತ್ತಿ ತೋರಿಸಿದ ಕುಮಾರಸ್ವಾಮಿ, "ಸಂಶೋಧನಾ ಸಂಸ್ಥೆಗಳನ್ನು ಬಲಪಡಿಸುವುದು ಅತ್ಯಂತ ನಿರ್ಣಾಯಕವಾಗಿದೆ ಮತ್ತು ಈ ಉಪಕ್ರಮದ ಭಾಗವಾಗಿ, ನಾವು ICAR-IIHR ಗೆ ಡೀಮ್ಡ್ ವಿಶ್ವವಿದ್ಯಾಲಯ ಸ್ಥಾನಮಾನವನ್ನು ನೀಡಲು ಕ್ರಮ ತೆಗೆದುಕೊಳ್ಳುತ್ತೇವೆ" ಎಂದರು.

ಎಚ್ ಡಿ ಕುಮಾರಸ್ವಾಮಿ
ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಕೊಟ್ಟಿರುವ ಲೋಕಾಯುಕ್ತವನ್ನ ದೇವರೇ ಕಾಪಾಡಬೇಕು: ಹೆಚ್​.ಡಿ ಕುಮಾರಸ್ವಾಮಿ

"ರಾಜ್ಯದ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಚರ್ಚಿಸಲು ನಾನು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಹಲವು ಬಾರಿ ಭೇಟಿ ಮಾಡಿದ್ದೇನೆ. ಯುವ ರೈತರು ಪ್ರಯೋಜನ ಪಡೆಯಬೇಕಾದ ಹಲವಾರು ಸಬ್ಸಿಡಿ ಯೋಜನೆಗಳನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ಭಾರತೀಯ ಕೃಷಿ ಉತ್ಪನ್ನಗಳಿಗೆ ಜಾಗತಿಕವಾಗಿ ಭಾರಿ ಬೇಡಿಕೆಯಿದೆ ಮತ್ತು ನಗರಗಳಿಗೆ ವಲಸೆ ಹೋಗುವ ಬದಲು, ಗ್ರಾಮೀಣ ಯುವಕರು ತಮ್ಮ ಹಳ್ಳಿಗಳಲ್ಲೇ ಅವಕಾಶಗಳನ್ನು ಅನ್ವೇಷಿಸಬೇಕು. ಅರ್ಧ ಎಕರೆ ಭೂಮಿ ಇದ್ದರೂ ಸಹ, ರೈತರು ಲಕ್ಷಾಂತರ ರೂಪಾಯಿಗಳನ್ನು ಗಳಿಸಬಹುದು" ಎಂದು ಅವರು ಹೇಳಿದರು.

ನಾನು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದಿಲ್ಲ ಎಂದು ಯಾವಾಗಲೂ ಹೇಳಿದ್ದೇನೆ. ಆದರೆ ಗ್ರಾಮೀಣ ಭಾರತದ ಜೀವನಾಡಿಯಾಗಿರುವ ಕೃಷಿಯನ್ನು ನಿರ್ಲಕ್ಷಿಸಬಾರದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com