ಕನ್ನಡ ಸಿನಿಮಾ ಕಲಾವಿದರಿಗೆ ಡಿಕೆಶಿ ಧಮ್ಕಿ: ಜನರೇ 'ನಟ್ಟು ಬೋಲ್ಟ್' ಟೈಟ್ ಮಾಡೊ ಸಮಯ ಬಂದಿದೆ- BJP

ಬಹಿರಂಗ ವೇದಿಕೆಯಲ್ಲಿ ಕನ್ನಡ ಸಿನಿಮಾ ಕಲಾವಿದರಿಗೆ ಡಿಕೆ ಶಿವಕುಮಾರ್ ಧಮ್ಕಿ ಹಾಕಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್, ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
DCM DK Shivakumar, R. ashok
ಡಿಸಿಎಂ ಡಿಕೆಶಿವಕುಮಾರ್, ಆರ್.ಅಶೋಕ್
Updated on

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFFes)ಉದ್ಘಾಟನೆ ವೇಳೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿರುವ 'ನಟ್ಟು ಬೋಲ್ಟ್ ಟೈಟ್ 'ಮಾಡುವೆ ಹೇಳಿಕೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.

ಬಹಿರಂಗ ವೇದಿಕೆಯಲ್ಲಿ ಕನ್ನಡ ಸಿನಿಮಾ ಕಲಾವಿದರಿಗೆ ಡಿಕೆ ಶಿವಕುಮಾರ್ ಧಮ್ಕಿ ಹಾಕಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್, ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಆರ್. ಅಶೋಕ್, ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಸಾಹೇಬರು, ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದ್ದಾರೆ.

DCM DK Shivakumar, R. ashok
BIFFes ಉದ್ಘಾಟನೆ: ನಿಮ್ಮ ನಟ್ಟು ಬೋಲ್ಟ್ ಟೈಟ್ ಮಾಡುವೆ; ಡಿ.ಕೆ ಶಿವಕುಮಾರ್ ಎಚ್ಚರಿಕೆ ಯಾರಿಗೆ?

ಸಮಾಜದಲ್ಲಿ ಎಲ್ಲರೂ ತಮಗೆ ಮತ್ತು ತಮ್ಮ ಪಕ್ಷಕ್ಕೆ ಸೆಲ್ಯೂಟ್ ಹೊಡೆದು, ತಮ್ಮ ಅಡಿಯಾಳುಗಳಂತೆ ನಡೆದುಕೊಳ್ಳಬೇಕು ಎನ್ನುವ ಕೆಟ್ಟ ಮನಸ್ಥಿತಿಯಿಂದ ಹೊರಗೆ ಬನ್ನಿ. ಕಲಾವಿದರು ಯಾರ ಸ್ವತ್ತೂ ಅಲ್ಲ. ಕಲಾವಿದರಿಗೆ ಅವರ ವಿವೇಚನೆಗೆ ತಕ್ಕಂತೆ ನಡೆದುಕೊಳ್ಳುವ, ಯಾರ ಜೊತೆ ಬೇಕಾದರೂ ಗುರುತಿಸಿಕೊಳ್ಳುವ ಅಥವಾ ಗುರುತಿಸಿಕೊಳ್ಳದಿರುವ ಸ್ವಾತಂತ್ರ್ಯವಿದೆ, ಹಕ್ಕಿದೆ ಎಂದು ಹೇಳಿದ್ದಾರೆ.

ಕಲಾವಿದರು ನಿಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ. ನಿಮ್ಮ ಪಕ್ಷದ ಕಾರ್ಯಕರ್ತರನ್ನು ನಡೆಸಿಕೊಂಡ ರೀತಿ ಕಲಾವಿದರನ್ನು ನಡೆಸಿಕೊಳ್ಳಬೇಡಿ. ಕಲಾವಿದರಿಗೆ ಗೌರವ ಕೊಡುವುದನ್ನು ಕಲಿಯಿರಿ ಎಂದು ಸಲಹೆ ನೀಡಿದ್ದಾರೆ.

ಮತ್ತೊಂದೆಡೆ ರಾಜ್ಯದ ಜನರೇ ನಿಮ್ಮ ನಟ್ಟು, ಬೋಲ್ಟ್ ಟೈಟ್ ಮಾಡುವ ಸಮಯ ಬಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com