ಆಕಾಶ-ಭೂಮಿ ಒಂದಾದರೂ ಸರಿ ಬಂದ್ ದಿನಾಂಕ ಬದಲಾಗಲ್ಲ, ಕನ್ನಡಿಗರೆಲ್ಲರೂ ಒಗ್ಗೂಡಿ ಬಂದ್ ಯಶಸ್ವಿಗೊಳಿಸಿ: ವಾಟಾಳ್‌ ನಾಗರಾಜ್‌ ಮನವಿ

ಗಡಿ ನಾಡು, ಕನ್ನಡ ಹಾಗೂ ಕನ್ನಡಿಗರ ಶಕ್ತಿಯು ಅಖಂಡ ಕರ್ನಾಟಕವನ್ನು ಬಂದ್ ಮಾಡುವ ಮೂಲಕ ಪ್ರದರ್ಶನವಾಗಬೇಕು. ಕನ್ನಡಿಗರ ಶಕ್ತಿ ದೇಶಕ್ಕೆ ಗೊತ್ತಾಗಬೇಕು ಎಂದರೆ ಮಾ.22ರಂದು ಕರ್ನಾಟಕ ಸಂಪೂರ್ಣ ಬಂದ್ ಆಗಬೇಕು.
ವಾಟಳ್ ನಾಗರಾಜ್
ವಾಟಳ್ ನಾಗರಾಜ್
Updated on

ಮೈಸೂರು: ಆಕಾಶ ಭೂಮಿಗೆ ಇಳಿದರೂ ಸರಿ ಬಂದ್ ದಿನಾಂಕ ಬದಲಾಯಿಸುವುದಿಲ್ಲ. ಮಾರ್ಚ್ 22ರಂದು ಕರ್ನಾಟಕ ಬಂದ್ ಮಾಡೇ ಮಾಡುತ್ತೇವೆಂದು ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಭಾನುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ನಾಡು, ಕನ್ನಡ ಹಾಗೂ ಕನ್ನಡಿಗರ ಶಕ್ತಿಯು ಅಖಂಡ ಕರ್ನಾಟಕವನ್ನು ಬಂದ್ ಮಾಡುವ ಮೂಲಕ ಪ್ರದರ್ಶನವಾಗಬೇಕು. ಕನ್ನಡಿಗರ ಶಕ್ತಿ ದೇಶಕ್ಕೆ ಗೊತ್ತಾಗಬೇಕು ಎಂದರೆ ಮಾ.22ರಂದು ಕರ್ನಾಟಕ ಸಂಪೂರ್ಣ ಬಂದ್ ಆಗಬೇಕು ಎಂದು ಒತ್ತಾಯಿಸಿದರು.

ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳು ಅಭಿವೃದ್ಧಿಯಾಗಬೇಕಾಗಿದೆ. ಕೇಂದ್ರ ಸರ್ಕಾರವು ರಾಜ್ಯವನ್ನು ಕಡೆಗಣಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಎಂದೆಂದೂ ಕಂಡಿರದ ಬಂದ್ ಆಗಬೇಕು. ಈಗಾಗಲೇ 1900ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ. ಈ ಬಂದ್ ಕನ್ನಡಿಗರಿಗಾಗಿ ನಡೆಯುತ್ತಿರುವ ಬಂದ್ ಆಗಿದೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಕೂಡ ಕೊನೆ ಕ್ಷಣದಲ್ಲಿ ಬೆಂಬಲ ಸೂಚಿಸುತ್ತಾರೆ. ನಾರಾಯಣಗೌಡರ ಬಗ್ಗೆ ನಮಗೆ ಗೌರವ ಇದೆ. ಅವರ ಜೊತೆಯೂ ಕೂಡ ಮಾತನಾಡುತ್ತೇವೆ. ಬಂದ್‌ಗೆ ಯಾರು ಕೂಡ ವಿರೋಧ ಮಾಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಲವರು ಬಂದ್ ಬಗ್ಗೆ ವ್ಯತಿರಿಕ್ತವಾಗಿ ಮಾತನಾಡುತ್ತಿದ್ದಾರೆ. ಅವರು ಅವಿವೇಕಿಗಳು. ಕನ್ನಡಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡುವ ಭಾವನೆ ಇರಬೇಕು. ವಿದ್ಯಾರ್ಥಿಗಳು ಎಲ್ಲಾ ತ್ಯಾಗಕ್ಕೂ ಸಿದ್ಧರಾಗಬೇಕು. ಕರ್ನಾಟಕ, ಭಾಷೆ ಮತ್ತು ಜನರ ಹಿತದೃಷ್ಟಿಯಿಂದ ಎಲ್ಲಾ ಕನ್ನಡಿಗರು ಕೈಜೋಡಿಸಬೇಕೆಂದು ಹೇಳಿದರು.

ಇದೇ ವೇಳೆ ಎಂಇಎಸ್ ದೌರ್ಜನ್ಯ ಖಂಡಿಸಿ ಹಾಗೂ ಸಾರಿಗೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರ ಬೆಂಗಳೂರಿನಲ್ಲಿ ರಾಜಭವನ ಮುತ್ತಿಗೆ ಹಾಕುತ್ತೇವೆ ಎಂದು ತಿಳಿಸಿದರು.

ವಾಟಳ್ ನಾಗರಾಜ್
ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ; ಮಾ. 22 ರಂದು ಕರ್ನಾಟಕ ಬಂದ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com