ಶಾಸಕರ ವೇತನ ಹೆಚ್ಚಳಕ್ಕೆ ಸಿಎಂ ನೇತೃತ್ವದ ವ್ಯವಹಾರ ಸಲಹಾ ಸಮಿತಿ ಒಪ್ಪಿಗೆ

ಇದಕ್ಕೆ ಸಂಬಂಧಿಸಿದ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಸರ್ಕಾರ ಮಂಡಿಸಲಿದೆ. ಇದಕ್ಕೆ ಒಪ್ಪಿಗೆ ಸಿಕ್ಕ ತಕ್ಷಣ ಜನಪ್ರತಿನಿಧಿಗಳ ವೇತನ ಹೆಚ್ಚಳವಾಗಲಿದೆ ಎಂದು ತಿಳಿದುಬಂದಿದೆ.
Siddaramaiah
ಸಿದ್ದರಾಮಯ್ಯ
Updated on

ಬೆಂಗಳೂರು: ಶಾಸಕರ ವೇತನ ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ವ್ಯವಹಾರ ಸಲಹಾ ಸಮಿತಿ ಅನುಮೋದನೆ ನೀಡಿದ್ದು, ಈ ಬೆಳವಣಿಗೆ ಸಾರ್ವಜನಿಕರ ಕಣ್ಣು ಕೆಂಪಗಾಗುವಂತೆ ಮಾಡಿದೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಡಿಸಿಎಂ ಡಿಕೆ ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಸ್ಪೀಕರ್ ಯು.ಟಿ. ಖಾದರ್ ಮತ್ತು ಪರಿಷತ್ ಅಧ್ಯಕ್ಷ ಬಸವರಾಜ ಹೊರಟ್ಟಿ ಭಾಗವಹಿಸಿದ್ದ ಉನ್ನತ ಮಟ್ಟದ ಸಭೆಯಲ್ಲಿ ಈ ಪ್ರಸ್ತಾವನೆಗೆ ಯಾವುದೇ ಪ್ರತಿರೋಧ ವ್ಯಕ್ತವಾಗಿಲ್ಲ ಎಂದು ವರದಿಯಾಗಿದೆ.

ಶಾಸಕರಿಗೆ ಎಷ್ಟರ ಪ್ರಮಾಣದಲ್ಲಿ ವೇತನ ಹೆಚ್ಚಳ ಮಾಡಿದೆ ಎಂಬುದು ತಿಳಿದುಬಂದಿಲ್ಲ. ಆದರೆ, ಇದಕ್ಕೆ ಸಂಬಂಧಿಸಿದ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಸರ್ಕಾರ ಮಂಡಿಸಲಿದೆ. ಇದಕ್ಕೆ ಒಪ್ಪಿಗೆ ಸಿಕ್ಕ ತಕ್ಷಣ ಜನಪ್ರತಿನಿಧಿಗಳ ವೇತನ ಹೆಚ್ಚಳವಾಗಲಿದೆ ಎಂದು ತಿಳಿದುಬಂದಿದೆ.

ಫೆಬ್ರವರಿ 2022ರಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಶಾಸಕರ ವೇತನವನ್ನು ಹೆಚ್ಚಳ ಮಾಡಿತ್ತು. ಆಗಲೂ ಕಾಂಗ್ರೆಸ್ ಅಥವಾ ಜೆಡಿಎಸ್ ನಿಂದ ಯಾವುದೇ ವಿರೋಧ ವ್ಯಕ್ತವಾಗಿರಲಿಲ್ಲ.

ಪ್ರಸ್ತುತ ಒಬ್ಬ ಶಾಸಕನ ತಿಂಗಳ ವೇತನವು 40,000 ರೂ, ಕ್ಷೇತ್ರ ಭತ್ಯೆ – 60,000 ರೂಸ ಪ್ರಯಾಣ ಭತ್ಯೆ – 60,000 ರೂ, ಆಪ್ತ ಸಹಾಯಕರ ವೇತನ – 20,000 ರೂ, ದೂರವಾಣಿ ವೆಚ್ಚ – 20,000 ರೂ, ಅಂಚೆ ವೆಚ್ಚ – 5000 ರೂ ಸೇರಿ ಒಟ್ಟು ಮೊತ್ತ – 2,05,000 ರೂ ಇದೆ.

Siddaramaiah
ಹಣದ ಲಭ್ಯತೆ ಆಧರಿಸಿ ಗುತ್ತಿಗೆದಾರರ ಬಿಲ್‌ ಪಾವತಿ: ಸಿಎಂ ಸಿದ್ದರಾಮಯ್ಯ

ಈಗಾಗಲೇ ರಾಜ್ಯದ ಜನರು ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದು, ಸರ್ಕಾರ ನಿರಂತರವಾಗಿ ಬೆಲೆ ಏರಿಕೆ ಮಾಡಿ ಜನರ ಮೇಲೆ ಹೊರೆ ಹಾಕುತ್ತಿದೆ. ಈ ಮಧ್ಯೆ ಶಾಸಕರ ವೇತನ ಹೆಚ್ಚಳ ಜನರ ಕಣ್ಣು ಕೆಂಪಗಾಗುವಂತೆ ಮಾಡಿದೆ.

ಏತನ್ಮಧ್ಯೆ ಕಾಂಗ್ರೆಸ್ ತನ್ನ ಶಾಸಕಾಂಗ ಪಕ್ಷದ ಸಭೆಯನ್ನು ಮಾರ್ಚ್ 4 ರಿಂದ 10ಕ್ಕೆ ನಿಗದಿಪಡಿಸಿದೆ ಎಂದು ತಿಳಿದುಬಂದಿದೆ.

ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಶಾಸಕರು ಇದರಿಂದ ಅತೃಪ್ತಗೊಂಡಿದ್ದಾರೆಂದು ಮೂಲಗಳು ತಿಳಿಸಿವೆ. ಅಭಿವೃದ್ಧಿಗೆ ನಿಧಿಯ ಕೊರತೆ ಎದುರಾಗಿದ್ದು, ಶಾಸಕರು ಅಸಮಾಧಾನಗೊಂಡಿರುವ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಅಸಮಾಧಾನಿತ ಶಾಸಕರನ್ನ ಸಮಾಧಾನಪಡಿಸಲು ಮಾರ್ಚ್ 7 ಪಂದು ಬಜೆಟ್ ನಲ್ಲಿ ಮಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿವೃದ್ಧಿಗೆ ಅನುದಾನ ಘೋಷಣೆ ಮಾಡಲುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com