

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಅನ್ನು ರಾತ್ರಿ ವೇಳೆ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಈ ಕುರಿತು ಬೆಂಗಳೂರು ನಗರ ಸಂಚಾರಿ ಪೊಲೀಸರು ವಾಹನ ಸವಾರರಿಗೆ ಮಾಹಿತಿ ನೀಡಿದ್ದು, ಇಂದು ರಾತ್ರಿಯಿಂದಲೇ ಅನ್ವಯವಾಗುವಂತೆ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ರಾತ್ರಿ ಎಲ್ಲಾ ರೀತಿಯ ವಾಹನಗಳ ಸಂಚಾರ ಬಂದ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯ ತನಕ ಫ್ಲೈ ಓವರ್ ಮೇಲೆ ಎಲ್ಲಾ ಮಾದರಿಯ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಈ ವಾಹನ ಸಂಚಾರ ನಿರ್ಬಂಧ ಜಾರಿಯಲ್ಲಿರುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
ಇನ್ನು ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ನಗರದ ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ಫ್ಲೈಓವರ್ ಕ್ಲೋಸ್ ಆಗಲಿದ್ದು, ಬೆಳಗ್ಗೆ 6ರಿಂದ ರಾತ್ರಿ 11ರವರೆಗೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೂ ರಾತ್ರಿ ವೇಳೆ ಫ್ಲೈಓವರ್ ಬಂದ್ ಆಗಲಿದೆ ಎಂದು ತಿಳಿಸಿದೆ.
Advertisement