ವಿಧಾನಸಭೆ ಕಲಾಪದ ನೇರಪ್ರಸಾರದಲ್ಲಿ ವಿಪಕ್ಷಗಳ ಭಾಷಣಕ್ಕೆ ಕತ್ತರಿ: ಅಧಿಕಾರಿ ಅಮಾನತು

ವಿಧಾನಸಭೆ ಕಲಾಪದ ನೇರ ಪ್ರಸಾರದಲ್ಲಿ ವಿರೋಧ ಪಕ್ಷದ ಸದಸ್ಯರನ್ನು ತೋರಿಸದೇ, ಕೇವಲ ಆಡಳಿತ ಪಕ್ಷದವರನ್ನು ತೋರಿಸಲಾಗುತ್ತಿತ್ತು. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.
BJP legislators gather outside the House, during the ongoing session, at Vidhana Soudha in Bengaluru on Tuesday.
ಮಂಗಳವಾರ ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುತ್ಅತಿದ್ಧಿದ ವೇಶನದ ಸಂದರ್ಭದಲ್ಲಿ ಬಿಜೆಪಿ ಶಾಸಕರು ಸದನದ ಹೊರಗೆ ನಿಂತಿರುವುದು.
Updated on

ಬೆಂಗಳೂರು: ಸದನದ ಕಾರ್ಯ ಕಲಾಪಗಳ ನೇರಪ್ರಸಾರದಲ್ಲಿ ಪ್ರತಿಪಕ್ಷ ಸದಸ್ಯರ ಮಾತು ಪ್ರಸಾರವಾಗದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಇದಕ್ಕೆ ಸಂಬಂಧಪಟ್ಟ ಅಧಿಕಾರಿಯನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ.

ವಿಧಾನಸಭೆ ಕಲಾಪದ ನೇರ ಪ್ರಸಾರದಲ್ಲಿ ವಿರೋಧ ಪಕ್ಷದ ಸದಸ್ಯರನ್ನು ತೋರಿಸದೇ, ಕೇವಲ ಆಡಳಿತ ಪಕ್ಷದವರನ್ನು ತೋರಿಸಲಾಗುತ್ತಿತ್ತು. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಬಳಿಕ ಕಲಾಪವನ್ನು ಸುಮಾರು 10 ನಿಮಿಷಗಳ ಕಾಲ ಮುಂದೂಡಲಾಗಿತ್ತು. ಭೋಜನ ವಿರಾಮದ ಬಳಿಕವೂ ಪ್ರತಿಪಕ್ಷ ನಾಯಕರ ಭಾಷಣ ಪ್ರಸಾರವಾಗಿರಲಿಲ್ಲ.

ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಈ ಬಗ್ಗೆ ತನಿಖೆ ಕೈಗೊಂಡು ಸಂಬಂಧಪಟ್ಟ ಮುಖ್ಯಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದರು.

ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು, ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು.

ಇದಕ್ಕೆ ಬಿಜೆಪಿ ಸದಸ್ಯರು ಕಿರಿಯ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳದೆ ಹಿರಿಯ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದಾದ ಕೆಲವು ನಿಮಿಷಗಳ ಬಳಿಕ ಸಮಸ್ಯೆ ಬಗೆಹರಿಯಿತು.

BJP legislators gather outside the House, during the ongoing session, at Vidhana Soudha in Bengaluru on Tuesday.
ವಿಧಾನಸಭೆಯಲ್ಲಿ ನಟ್ಟು ಬೋಲ್ಟ್ ಸದ್ದು; ನಮ್ಮನ್ನು ಟಿವಿಯಲ್ಲಿ ತೋರಿಸುತ್ತಿಲ್ಲ ಎಂದು ಬಿಜೆಪಿ ಗಲಾಟೆ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com