ಮಾರ್ಚ್ 21 ರಿಂದ 23 ರವರೆಗೆ ಬೆಂಗಳೂರಿನಲ್ಲಿ ಆರ್‌ಎಸ್‌ಎಸ್‌ ಅಖಿಲ ಭಾರತೀಯ ಪ್ರತಿನಿಧಿ ಸಭೆ

ಅಖಿಲ ಭಾರತೀಯ ಪ್ರತಿನಿಧಿ ಸಭೆಯು ಮಾರ್ಚ್ 21, 22 ಮತ್ತು 23 ರಂದು ಬೆಂಗಳೂರಿನ ಮಾಗಡಿ ರಸ್ತೆಯ ಚನ್ನೇನಹಳ್ಳಿಯಲ್ಲಿರುವ ಜನಸೇವಾ ವಿದ್ಯಾ ಕೇಂದ್ರ ಆವರಣದಲ್ಲಿ ನಡೆಯಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಅಖಿಲ ಭಾರತೀಯ ಪ್ರತಿನಿಧಿ ಸಭೆಯನ್ನು ಮಾರ್ಚ್ 21 ರಿಂದ 23 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ.

ಆರ್‌ಎಸ್‌ಎಸ್‌ನ ಅತ್ಯುನ್ನತ ನೀತಿ ನಿರ್ಧಾರಗಳನ್ನು ನಿರೂಪಿಸುವ ಅಖಿಲ ಭಾರತೀಯ ಪ್ರತಿನಿಧಿ ಸಭೆಯು ಮಾರ್ಚ್ 21, 22 ಮತ್ತು 23 ರಂದು ಬೆಂಗಳೂರಿನ ಮಾಗಡಿ ರಸ್ತೆಯ ಚನ್ನೇನಹಳ್ಳಿಯಲ್ಲಿರುವ ಜನಸೇವಾ ವಿದ್ಯಾ ಕೇಂದ್ರ ಆವರಣದಲ್ಲಿ ನಡೆಯಲಿದೆ.

ಸಭೆಯ ಸಮಯದಲ್ಲಿ, 2024-25ನೇ ವರ್ಷದ ಸಂಘಟನೆಯ ಚಟುವಟಿಕೆಗಳ ಕುರಿತು ವಿಮರ್ಶಾತ್ಮಕ ಚರ್ಚೆಯ ಜೊತೆಗೆ ವಿಶೇಷ ಉಪಕ್ರಮಗಳು ಮತ್ತು ಭವಿಷ್ಯದ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಲಾಗುತ್ತದೆ.

ಸಾಂದರ್ಭಿಕ ಚಿತ್ರ
ಜಾತಿ ಹೆಸರಲ್ಲಿ ಹೊಡೆದಾಳುವವರ ಮಧ್ಯೆ ನಾವು ಹಿಂದೂಗಳನ್ನು ಒಗ್ಗೂಡಿಸಬೇಕು: RSS ಮುಖ್ಯಸ್ಥ ಮೋಹನ್ ಭಾಗವತ್

2025 ರ ವಿಜಯದಶಮಿಯಂದು ಆರ್‌ಎಸ್‌ಎಸ್ ಸ್ಥಾಪನೆಯಾಗಿ 100 ವರ್ಷ ಪೂರೈಸಲಿದ್ದು, 2025 ರಿಂದ 2026 ರವರೆಗೆ ಶತಮಾನೋತ್ಸವ ವರ್ಷಾಚರಣೆಯ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.

ಸಭೆಯಲ್ಲಿ ಆರ್‌ಎಸ್‌ಎಸ್ ಸರಸಂಘಚಾಲಕ ಡಾ. ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮತ್ತು ಇತರ ಹಿರಿಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com