ಗಾಯಕಿ ಶಿವಶ್ರೀ ಜೊತೆ ತೇಜಸ್ವಿ ಸೂರ್ಯ ವಿವಾಹ
ರಾಜ್ಯ
ಬೆಂಗಳೂರು: ಗಾಯಕಿ ಶಿವಶ್ರೀ ಜೊತೆ ಸಂಸದ ತೇಜಸ್ವಿ ಸೂರ್ಯ ದಾಂಪತ್ಯ ಜೀವನಕ್ಕೆ ಪ್ರವೇಶ
ಮಾರ್ಚ್ 9ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಆರತಕ್ಷತೆ ನಡೆಯಲಿದೆ.
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ಇಂದು (ಮಾರ್ಚ್ 6) ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ಕನಕಪುರ ರಸ್ತೆಯ ರೆಸಾರ್ಟ್‌ನಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಉಪಸ್ಥಿತಿಯಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ. ಬುಧವಾರ ಸಂಜೆಯಿಂದಲೇ ವರಪೂಜೆ ಸೇರಿದಂತೆ ಮದುವೆ ಶಾಸ್ತ್ರಗಳು ನಡೆದಿದ್ದವು.
ಇಂದು ಬೆಳಗ್ಗೆ 10.45 ತುಲಾ ಲಗ್ನದಲ್ಲಿ ಶಿವಶ್ರಿ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದ್ದಾರೆ. ಇಂದೇ ಶಿವಶ್ರೀ ಅವರನ್ನು ಮನೆ ತುಂಬಿಸಿಕೊಳ್ಳುವ ಶಾಸ್ತ್ರ ನಡೆಯಲಿದೆ.
ಮಾರ್ಚ್ 9ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಆರತಕ್ಷತೆ ನಡೆಯಲಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ