
ಬೆಂಗಳೂರು: ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದ ಕನ್ನಡದ ನಟಿ ರನ್ಯಾ ರಾವ್ ಜಾಮೀನು ಅರ್ಜಿಯ ತೀರ್ಪನ್ನು ಸ್ಥಳೀಯ ನ್ಯಾಯಾಲಯವೊಂದು ಗುರುವಾರ ಕಾಯ್ದಿರಿಸಿದೆ.
ಮುಂದಿನ ವಿಚಾರಣೆಗಾಗಿ ಆರೋಪಿಯನ್ನು ತನ್ನ ವಶಕ್ಕೆ ನೀಡಬೇಕು ಎಂದು ಆದಾಯ ಗುಪ್ತಚರ ನಿರ್ದೇಶನಾಲಯ (DRI)ವಾದದ ಬಳಿಕ ಆರ್ಥಿಕ ಅಪರಾಧಗಳ ನ್ಯಾಯಾಲಯ ಶುಕ್ರವಾರಕ್ಕೆ ತನ್ನ ತೀರ್ಪನ್ನು ಕಾಯ್ದಿರಿಸಿತು.
ವಿಚಾರಣೆ ವೇಳೆ ಸಂಭಾವ್ಯ ರಾಷ್ಟ್ರೀಯ ಭದ್ರತೆಯ ಪರಿಣಾಮಗಳಿಂದಾಗಿ ಸಂಪೂರ್ಣ ತನಿಖೆಯ ಅಗತ್ಯವನ್ನು ಒತ್ತಿಹೇಳಿದ DRI,ರನ್ಯಾ ರಾವ್ ಅವರನ್ನು ಮೂರು ದಿನಗಳ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಿತು.
ಆರೋಪಿ ವಿಚಾರಣೆಯಿಂದ ಕಳ್ಳ ಸಾಗಣೆಯ ಬಹು ಜಾಲದ ಸಂಪರ್ಕವನ್ನು ಬಹಿರಂಗಪಡಿಸಬಹುದು ಎಂದು ವಾದಿಸಿದ ಡಿಆರ್ ಐ, ಬಹು ಆಯಾಮದಲ್ಲಿ ತನಿಖೆಯ ಅಗತ್ಯವಿದೆ ಎಂದು ಹೇಳಿತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ನಟಿ ಪರ ವಕೀಲರು, ಕಸ್ಟಡಿಯ ಅಗತ್ಯವಿಲ್ಲ ಎಂದು ವಾದಿಸಿತು. ಆದರೆ, ಈ ರೀತಿಯ ಸೂಕ್ಷ್ಮ ಪ್ರಕರಣಗಳಲ್ಲಿ ಆಕ್ಷೇಪಣೆಗಳನ್ನು ಸ್ವೀಕರಿಸಬಾರದು ಎಂದು ಪ್ರಾಸಿಕ್ಯೂಷನ್ ಪ್ರತಿವಾದಿಸಿತು.
ಪ್ರಕರಣದ ಕೆಲವು ವಿವರಗಳನ್ನು ತೆರೆದ ನ್ಯಾಯಾಲಯದಲ್ಲಿ ಬಹಿರಂಗಪಡಿಸಲಾಗುವುದಿಲ್ಲ. ಅಗತ್ಯವಿದ್ದರೆ ಮುಚ್ಚಿದ ಕವರ್‌ನಲ್ಲಿ ಮಾಹಿತಿ ನೀಡಲಾಗುವುದು.ಕಳೆದ ಎರಡು ದಿನಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಲಾಗಿದ್ದು, ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವುದರಿಂದ ತನಿಖೆ ಮೇಲೆ ಪರಿಣಾಮ ಬೀರಬಹುದು ಎಂದು DRI ನ್ಯಾಯಾಲಯಕ್ಕೆ ಹೇಳಿತು.
ಅಂತಹ ಪ್ರಕರಣಗಳಲ್ಲಿ 40 ದಿನಗಳವರೆಗೆ ಕಸ್ಟಡಿಗೆ ಅನುಮತಿ ನೀಡುವ ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಾಸಿಕ್ಯೂಟರ್‌ಗಳು ಉಲ್ಲೇಖಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು, ತನಿಖೆ ನಿರ್ಣಾಯಕ ಹಂತಕ್ಕೆ ಬಂದ ನಂತರ ಮಾತ್ರ ಜಾಮೀನು ಅರ್ಜಿ ಪರಿಗಣಿಸಲು ನಿರ್ಧರಿಸಿದರು.
Advertisement