
ಬೆಂಗಳೂರು: ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡಿಸಿದ್ದು, ಈ ಬಜೆಟ್ ಹಲಾಲ್ ಬಜೆಟ್ ಎಂದು ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಟೀಕಿಸಿದೆ.
ಬಜೆಟ್ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕರ್ನಾಟಕ ಬಜೆಟ್ ಅನ್ನು ಇಸ್ಲಾಮೀಕರಣಗೊಳಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಬಜೆಟ್ ನಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಗಳಿಗೆ ನೀವು ಕೊಟ್ಟಿರುವುದು ಕೇವಲ ಚಿಪ್ಪು ಮಾತ್ರ!! ಎಂದು ವಾಗ್ದಾಳಿ ನಡೆಸಿದೆ.
ಇಂದು ವಿಧಾನಸಭೆಯಲ್ಲಿ 4,09,549 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಗ್ಯಾರಂಟಿ ಯೋಜನೆಗಳಿಗೆ ಬರೋಬ್ಬರಿ 51 ಸಾವಿರ ಕೋಟಿ ರೂ. ನೀಡುವುದರ ಜೊತೆಗೆ ಹತ್ತು ಹಲವು ಹೊಸ ಘೋಷಣೆಗಳನ್ನೂ ಮಾಡಿದ್ದಾರೆ.
ಈ ಪೈಕಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಎಲ್ಲರ ಕಣ್ಣಿಗೆ ಕಾಣುವಂತೆ ಭರಪೂರ ಅನುದಾನವನ್ನು ನೀಡಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಹಲಾಲ್ ಬಜೆಟ್, ಮುಸ್ಲಿಂ ಓಲೈಕೆ ಬಜೆಟ್ ಎಂದು ವಿಪಕ್ಷಗಳ ನಾಯಕರು ಟೀಕಿಸಿದ್ದಾರೆ.
ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ
ಮುಸ್ಲಿಮರ ಸರಳ ಮದುವೆಗೆ 50 ಸಾವಿರ ರೂ.
ವಕ್ಫ್, ಖಬರಸ್ಥಾನಗಳ ಮೂಲಸೌಕರ್ಯಕ್ಕೆ 150 ಕೋಟಿ ರೂ.
ಮುಸ್ಲಿಮರ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 50 ಲಕ್ಷ ರೂ.
ಮುಸ್ಲಿಮರು ಅತಿಹೆಚ್ಚು ವಾಸವಿರುವ ಪ್ರದೇಶದಲ್ಲಿ ITI ಸ್ಥಾಪನೆ
KEA ಅಡಿ ಮುಸ್ಲಿಮ್ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಶುಲ್ಕ ಕಡಿತ
ಉಲ್ಲಾಳದಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ವಸತಿ ಸಹಿತ ಪಿ.ಯು ಕಾಲೇಜು
ಮುಸ್ಲಿಂ ವಿದ್ಯಾರ್ಥಿಗಳ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ ಏರಿಕೆ
ಬೆಂಗಳೂರಿನ ಹಜ್ ಭವನದಲ್ಲಿ ಹೆಚ್ಚುವರಿ ಕಟ್ಟಡ ನಿರ್ಮಾಣ
ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ
ದೇಶದ ಯಾವುದೇ ರಾಜ್ಯದಲ್ಲೂ ಇಲ್ಲದ ರಾಜ್ಯ ಕಾಂಗ್ರೆಸ್ ನ ದಿವಾಳಿ ಮಾಡೆಲ್ ಜಾರಿ ಆಗುತ್ತಿದೆ ಎಂದು ಬಿಜೆಪಿ ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
Advertisement