
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ನಲ್ಲಿ ಮಹಿಳೆಯರ ಸಬಲೀಕರಣಕ್ಕೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಗ್ಯಾರಂಟಿ ಯೋಜನೆಗಳಲ್ಲಿ ಜನಪ್ರಿಯವಾದ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂಪಾಯಿಗಳನ್ನು 2025-26ರ ಸಾಲಿನ ವರ್ಷಕ್ಕೆ ಮೀಸಲಿರಿಸಲಾಗಿದೆ.
ಮಹಿಳಾ ಸಬಲೀಕರಣಕ್ಕೆ ಬಜೆಟ್ನಲ್ಲಿ ಇನ್ನೂ ಕೆಲ ಯೋಜನೆಗಳನ್ನು ಘೋಷಿಸಲಾಗಿದೆ. ಇದರಲ್ಲಿ ಅಕ್ಕ ಕೋ ಆಪರೇಟಿವ್ ಸೊಸೈಟಿ, ಅಕ್ಕ ಕ್ಯಾಂಟೀನ್ಗಳನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಅಕ್ಕ ಕೋ ಆಪರೇಟಿವ್ ವ್ಯಾಪ್ತಿಗೆ
ರಾಜ್ಯವ್ಯಾಪಿ ಅಕ್ಕ ಕೋ ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸಲಾಗುವುದು. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಅಕ್ಕ ಸಹಕಾರಿ ಸಂಘಗಳ ಅಡಿ ತರಲು ಯೋಜಿಸಲಾಗಿದೆ. ರಾಜ್ಯದ ವಿವಿಧೆಡೆ 16 ಹೊಸ ಮಹಿಳಾ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಿಲಾಗಿದೆ.
ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಗೃಹಜ್ಯೋತಿ ಯೋಜನೆಗೆ 10,100 ಕೋಟಿ ರೂ ನೀಡಲಾಗುತ್ತಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಇವೆರಡು ಯೋಜನೆಗಳು ಮುಖ್ಯವಾಗಿದ್ದು ಹೆಚ್ಚಿನ ಅನುದಾನ ಬೇಡುತ್ತವೆ.
ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಅಕ್ಕ ಕೆಫೆ ಕ್ಯಾಂಟೀನ್ಗಳನ್ನು ತೆರೆಯಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Advertisement