
2025-26 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಬೆಂಗಳೂರು ವಿಶ್ವವಿದ್ಯಾಯಲಕ್ಕೆ ಮರುನಾಮಕರಣವನ್ನು ಘೋಷಿಸಿದ್ದಾರೆ.
ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ, ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ| ಮನಮೋಹನ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ.ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸಲಾಗುವುದು ಎಂದು ಇದೇ ವೇಳೆ ಸಿಎಂ ತಿಳಿಸಿದ್ದಾರೆ.
ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ 4 ವರ್ಷಗಳಲ್ಲಿ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.
Advertisement