
ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 16 ನೇ ಬಜೆಟ್ ಮಂಡನೆ ಮಾಡಿದ್ದು, ಗ್ಯಾರೆಂಟಿ ಯೋಜನೆಗಳಿಗೆ ಅನುದಾನಗಳ ಜೊತೆಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುತ್ತಿದ್ದಾಗ ಕೆಲ ಕಾಲ ಸದನದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಹಿಂದೆ 2023 ರ ಜಲೈ ನಲ್ಲಿಯೂ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ಸದನದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಈಗ 2025-26 ನೇ ಸಾಲಿನ ಬಜೆಟ್ ಮಂಡನೆ ವೇಳೆ ವ್ಯಕ್ತಿಯೋರ್ವ ಕೂಗಿದ್ದಕ್ಕಾಗಿ ಇಡೀ ಸದನ ಒಂದು ಕ್ಷಣ ಗಾಬರಿಗೆ ಒಳಗಾಗಿತ್ತು.
ಒಳ ಮೀಸಲಾತಿಗೆ ಸಂಬಂಧಿಸಿದ ಕೂಗು ಇದಾಗಿದೆ. ಸಿಎಂ ಬಜೆಟ್ ಭಾಷಣದ ವೇಳೆ ಒಳ ಮೀಸಲಾತಿ ಸದ್ದು ಮಾಡಿದ್ದು, ಒಳಮೀಸಲಾತಿ ನೀಡಿ ಎಂದು ವ್ಯಕ್ತಿಯೋರ್ವ ಜೋರಾಗಿ ಕೂಗಿದ ಪರಿಣಾಮ ಇಡೀ ಸದನ ಗಾಬರಿಗೆ ಒಳಗಾಗಿತ್ತು. ಬಳಿಕ ಆ ವ್ಯಕ್ತಿ ಕೂಗಿದ್ದಕ್ಕೆ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಖಾದರ್ ಮಾರ್ಷಲ್ ಗಳಿಗೆ ಸೂಚಿಸಿದರು.
2023-24ನೇ ಸಾಲಿನ ಬಜೆಟ್ ಮಂಡನೆ ವೇಳೆ ವೇಳೆ ಭದ್ರತಾ ಲೋಪವಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಸದನದ ಒಳಗೆ ಆಗಮಿಸಿ ಶಾಸಕರ ಸ್ಥಾನದಲ್ಲಿ ಕುಳಿತಿರುವ ಪ್ರಸಂಗ ನಡೆದಿತ್ತು.
Advertisement