
ಬೆಂಗಳೂರು: ಇದೇ ಮಾ.18 ರಂದು ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ದೆಹಲಿಗೆ ತೆರಳುತ್ತಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಅರಣ್ಯ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಭೆ ನಂತರ ಮಾತನಾಡಿದ ಅವರು, ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟ ಎಂದು ಹೇಳಲಾಗುತ್ತಿದೆ. 508 ಎಕರೆ 1 ಗುಂಟೆ ವಿಸ್ತೀರ್ಣದ ಅರಣ್ಯ ಭೂಮಿ ಬಳಕೆಗೆ ದೆಹಲಿಗೆ ತೆರಳಿ ಕೇಂದ್ರ ಪರಿಸರ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.
ಎತ್ತಿನಹೊಳೆ ಕಾಮಗಾರಿಗೆ ಬಳಸುವ ಅರಣ್ಯ ಭೂಮಿಗೆ ಬದಲಿಯಾಗಿ ಮತ್ತೊಂದು ಕಡೆ ಭೂಮಿ ನೀಡಲಾಗಿತ್ತು. ಈ ಕುರಿತು ಅರಣ್ಯ ಇಲಾಖೆ ಸ್ಪಷ್ಟನೆ ಕೇಳಿದ ಕಾರಣಕ್ಕೆ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು, ನಾನು ಅಧಿಕಾರಿಗಳ ಸಭೆ ನಡೆಸಿದೆವು. ತುಮಕೂರು ಹಾಗೂ ಹಾಸನ ಜಿಲ್ಲಾಧಿಕಾರಿಗಳು ಎಲ್ಲೆಲ್ಲಿ ಸರ್ಕಾರ ಜಮೀನುಗಳನ್ನು ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಬಹುದೋ ಆ ಕೆಲಸವನ್ನು ಮಾಡಿದ್ದಾರೆ" ಎಂದರು.
ಎಲ್ಲಾ ಅಡೆತಡೆಗಳನ್ನು ನಿವಾರಿಸಿ ತುಮಕೂರಿಗೆ ನೀರು ತಂದು, ಚಿಕ್ಕಬಳ್ಳಾಪುರಕ್ಕೆ ನೀರು ತರಲಾಗುವುದು. ಕೆಲಸ ನಿಂತು ಹೋಗಿರುವ ಕಾರಣಕ ಪ್ರತ್ಯೇಕ ಸಭೆ ನಡೆಸಲಾಯಿತು" ಎಂದು ಹೇಳಿದರು. ಸಿದ್ದರಾಮಯ್ಯ ಅವರ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಇಡಿ ನೀಡಿದ್ದ ಸಮನ್ಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿರುವ ಬಗ್ಗೆ ಕೇಳಿದಾಗ, "ಮುಡಾ ಪ್ರಕರಣ ರಾಜಕೀಯ ಪ್ರೇರಿತ ಎಂದು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇನೆ" ಎಂದು ತಿಳಿಸಿದರು.
Advertisement