ಕರ್ನಾಟಕ ಬಜೆಟ್ 2025: ಪತ್ರಕರ್ತರ ಮಾಸಾಶನ 15 ಸಾವಿರ ರೂ ಗೆ ಹೆಚ್ಚಳ; ಮಾಧ್ಯಮ ಸಂಜೀವಿನಿ ಯೋಜನೆ ಜಾರಿ

ಮಾಧ್ಯಮ ಮಾನ್ಯತೆ ಹೊಂದಿರುವ ರಾಜ್ಯದ ಒಟ್ಟು 2,500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆ.
siddaramaiah
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಪತ್ರಕರ್ತರ ಅಭ್ಯುದಯಕ್ಕಾಗಿ ಈ ಬಾರಿಯ ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಕೆಲ ಯೋಜನೆಗಳನ್ನು ಘೋಷಿಸಿದ್ದಾರೆ. ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೀಡಲಾಗುತ್ತಿರುವ ಮಾಸಾಶನ ಹೆಚ್ಚಿಸುವುದಾಗಿ ಅವರು ತಿಳಿಸಿದ್ದಾರೆ.

ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಪ್ರಸ್ತುತ ನೀಡುತ್ತಿರುವ 12,000 ರೂ. ಮಾಸಾಶನವನ್ನು 15,000 ರೂ.ಗಳಿಗೆ ಹಾಗೂ ಕುಟುಂಬ ಮಾಸಾಶನವನ್ನು 6,000 ರೂ.ಗಳಿಂದ 7,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ.

ಮಾಧ್ಯಮ ಮಾನ್ಯತೆ ಹೊಂದಿರುವ ರಾಜ್ಯದ ಒಟ್ಟು 2,500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ 'ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ' ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

siddaramaiah
ಘೋಷಣೆಗಳಿಗೆ ಸೀಮಿತವಾದ ಬಜೆಟ್: ಕರಾವಳಿ ಜನತೆ ನಿರಾಶೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com