lehar singh
ಲೆಹರ್ ಸಿಂಗ್

ವಕ್ಫ್ ಅಕ್ರಮ: ಹಾಲಿ ಹಾಗೂ ಮಾಜಿ ಸಚಿವರೂ ಭಾಗಿಯಾಗಿದ್ದು ದಾಖಲೆ ಇದೆ; ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಆರೋಪ

ವಕ್ಫ್ ಆಸ್ತಿ ಅಕ್ರಮದಲ್ಲಿ ಹಾಲಿ, ಮಾಜಿ ಸಚಿವರೂ ಭಾಗಿಯಾಗಿದ್ದು ಇದಕ್ಕೆ ಸಂಬಂಧಿಸಿದ ದಾಖಲೆಗಳೂ ಇವೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ ಗಂಭೀರ ಆರೋಪ ಮಾಡಿದ್ದಾರೆ.
Published on

ಬೆಂಗಳೂರು: ವಕ್ಫ್ ಆಸ್ತಿ ಅಕ್ರಮದಲ್ಲಿ ಹಾಲಿ, ಮಾಜಿ ಸಚಿವರೂ ಭಾಗಿಯಾಗಿದ್ದು ಇದಕ್ಕೆ ಸಂಬಂಧಿಸಿದ ದಾಖಲೆಗಳೂ ಇವೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ ಗಂಭೀರ ಆರೋಪ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ತಂದಿರುವ ದಾಖಲೆಗಳು ಲೋಕಾಯುಕ್ತಕ್ಕೆ ರಾಜ್ಯ ಸರ್ಕಾರ ಕೊಟ್ಟಿದ್ದು. ವಕ್ಫ್ ಆಸ್ತಿಗಳ ತನಿಖೆಗೆ ಸರ್ಕಾರವು ಜಸ್ಟೀಸ್ ಎನ್. ಆನಂದ್ ಸಮಿತಿಯನ್ನು ಸರ್ಕಾರ ರಚಿಸಿತ್ತು. ಅದರಂತೆ ತನಿಖೆ ನಡೆಸಿ ಒಟ್ಟು 40 ಸಾವಿರ ಪುಟಗಳ ದಾಖಲೆಯನ್ನು ಸಮಿತಿ ಸರ್ಕಾರಕ್ಕೆ ಕೊಟ್ಟಿತ್ತು ಎಂದು ಲೇಹರ್ ಸಿಂಗ್ ಹೇಳಿದ್ದಾರೆ.

ಪ್ರತಿ ಜಿಲ್ಲೆಗಳಲ್ಲಿ ಯಾವ್ಯಾವ ರೀತಿ ಹಗರಣ ಆಗಿದೆ ಎಂಬುದು ಈ ದಾಖಲೆಗಳಲ್ಲಿ ಇದೆ. ಬಹಳ ದೊಡ್ಡ ದೊಡ್ಡ ರಾಜಕಾರಣಿಗಳ ಹೆಸರು ಕೂಡ ಈ ದಾಖಲೆಗಳಲ್ಲಿದೆ. ಹಾಲಿ ಸಚಿವರು, ಮಾಜಿ ಸಚಿವರ ಹೆಸರುಗಳು ಕೂಡಾ ಈ ದಾಖಲೆಗಳಲ್ಲಿದೆ. ನಾನು ಯಾವುದೇ ರಾಜಕಾರಣಿಗಳ ಹೆಸರು ಬಹಿರಂಗಪಡಿಸುವುದಿಲ್ಲ ಎಂದು ಲೆಹರ್ ಸಿಂಗ್ ಹೇಳಿದ್ದಾರೆ.

lehar singh
25 ಸಾವಿರ ಅಲ್ಪಸಂಖ್ಯಾತ ಬಾಲಕಿಯರಿಗೆ ಆತ್ಮರಕ್ಷಣಾ ತರಬೇತಿ: CM ಘೋಷಣೆ ಚರ್ಚೆಗೆ ಗ್ರಾಸ; ಬೇರೆ ಹೆಣ್ಣುಮಕ್ಕಳಿಗೆ ರಕ್ಷಣೆ ಬೇಡವೇ?

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com