ಬೆಂಗಳೂರು: ಬಹುಭಾಷಾ ಚಿತ್ರನಟಿ ರಶ್ಮಿಕಾ ಮಂದಣ್ಣ ಅವರ ವಿರುದ್ಧ ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ (ಗಣಿಗ) ಮತ್ತು ಕನ್ನಡ ಹೋರಾಟಗಾರ ಟಿಎ ನಾರಾಯಣ ಗೌಡ ಟೀಕಿಸಿದ ಬೆನ್ನಲ್ಲೇ ನಟಿಗೆ ಸೂಕ್ತ ರಕ್ಷಣೆ ನೀಡುವಂತೆ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಒತ್ತಾಯಿಸಿದೆ.
ಈ ಸಂಬಂಧ ಅಮಿತ್ ಶಾ ಹಾಗೂ ಪರಮೇಶ್ವರ್ ಅವರಿಗೆ ಪತ್ರ ಬರೆದಿರುವ ಕೊಡುವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ, ರಶ್ಮಿಕಾ ಅವರನ್ನು "ಶಾಸಕರೊಬ್ಬರು ಬೆದರಿಸುತ್ತಿದ್ದಾರೆ ಎಂದು ಆರೋಪಿಸಿದ್ದು, ಇದನ್ನು ಕೊಡವರು "ಗೂಂಡಾಗಿರಿ" ಎಂದು ಪರಿಗಣಿಸುತ್ತಾರೆ ಎಂದು ಹೇಳಿದ್ದಾರೆ.
ಕೊಡವ ಲ್ಯಾಂಡ್‌ನ ಸ್ಥಳೀಯ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದ ರಶ್ಮಿಕಾ ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆಯ ಮೂಲಕ ಭಾರತೀಯ ಚಿತ್ರರಂಗದಲ್ಲಿ ಅಪಾರ ಯಶಸ್ಸನ್ನು ಸಾಧಿಸಿದ್ದಾರೆ. ಅವರು ಅಮಿತಾಬ್ ಬಚ್ಚನ್ ಮತ್ತು ಸಲ್ಮಾನ್ ಖಾನ್ ಅವರಂತಹ ಪ್ರಮುಖ ನಟರೊಂದಿಗೆ ನಟಿಸಿದ್ದಾರೆ. ರಶ್ಮಿಕಾ ಅವರು ಸ್ವಂತ ಆಯ್ಕೆ ಮಾಡುವ ಸ್ವಾತಂತ್ರ್ಯ ಹೊಂದಿದ್ದು, ಅದನ್ನು ಗೌರವಿಸಬೇಕು ಎಂದಿದ್ದಾರೆ.
ಯಾರದ್ದೋ ಸೂಚನೆಯಂತೆ ನಡೆದುಕೊಳ್ಳಬೇಕೆಂದು ಒತ್ತಾಯಿಸಬಾರದು. ಒಂದು ವೇಳೆ ಹೀಗೆ ಮಾಡಿದರೆ ಕೊಡವ ಫೋಬಿಯಾವನ್ನು ಪ್ರತಿಬಿಂಬಿಸುತ್ತದೆ. ಅಲ್ಲದೇ ಕೇವಲ ರಶ್ಮಿಕಾ ಅವರ ಸಮುದಾಯದ ಕಾರಣದಿಂದ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಅರ್ಥ ಬರುತ್ತದೆ ಎಂದು ಟೀಕಿಸಿದ್ದಾರೆ.

Advertisement