
ಬೆಂಗಳೂರು: ಮಂಗಳವಾರದಿಂದ ಮೂರು ದಿನ ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಶಿವಮೊಗ್ಗ ಮತ್ತು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿರುವುದಾಗಿ ಮಾಹಿತಿ ನೀಡಿದೆ.
ಮುಂಗಾರು ಪೂರ್ವ ಮಳೆಯು ಬುಧವಾರ, ಗುರುವಾರವೂ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವೆಡೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement