ಬೆಂಗಳೂರು 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಾಗ ಕೊನೆಗೂ ಫೈನಲ್‌..!

ಈ ಸಂಬಂಧ ಪ್ರಾಧಿಕಾರಕ್ಕೆ ಪ್ರಸ್ತಾವ ಕಳುಹಿಸಿದ್ದೇವೆ. ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ನಂತರ ಒಪ್ಪಿಗೆ ನೀಡಲಿದ್ದಾರೆ.
ಎಂಬಿ ಪಾಟೀಲ್
ಎಂಬಿ ಪಾಟೀಲ್
Updated on

ಬೆಂಗಳೂರು/ವಿಜಯಪುರ: ಬೆಂಗಳೂರು ಸಮೀಪ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ನೆಲಮಂಗಲ–ಕುಣಿಗಲ್‌ ರಸ್ತೆ ಮತ್ತು ಕನಕಪುರ ರಸ್ತೆಯಲ್ಲಿ ಎರಡು ಸ್ಥಳಗಳನ್ನು ಗುರುತಿಸಿ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಕಳುಹಿಸಿದ್ದೇವೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಣಿಗಲ್‌ ರಸ್ತೆ ಮತ್ತು ಕನಕಪುರ ರಸ್ತೆ ಎರಡೂ ಸ್ಥಳಗಳು ಬೆಂಗಳೂರು ಕೇಂದ್ರ ಸ್ಥಾನದಿಂದ 50 ಕಿ.ಮೀ.ದೂರದಲ್ಲಿವೆ. ನೆಲಮಂಗಲ–ಹಾಸನ ಹೆದ್ದಾರಿ ಜಂಕ್ಷನ್‌ನಿಂದ 10 ಕಿ.ಮೀ. ದೂರದಲ್ಲಿ ಒಂದು ಸ್ಥಳ, ಕನಕಪುರ ರಸ್ತೆ–ನೈಸ್‌ ರಸ್ತೆ ಜಂಕ್ಷನ್‌ನಿಂದ 10 ಕಿ.ಮೀ. ದೂರದಲ್ಲಿ ಇನ್ನೊಂದು ಸ್ಥಳ ಗುರುತಿಸಲಾಗಿದೆ ಎಂದು ಹೇಳಿದರು.

ಈ ಎರಡೂ ರಸ್ತೆಗಳು ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳ ಸಮೀಪ ಇವೆ ಇಲ್ಲವೇ ಅವಕ್ಕೆ ಹೊಂದಿಕೊಂಡಿವೆ. ಅಲ್ಲದೆ, ಈಗಾಗಲೇ ಇರುವ ಮೆಟ್ರೊ ಜಾಲದ ಕೊನೆಯ ನಿಲ್ದಾಣಗಳಗೆ ಕೆಲವೇ ಕಿ.ಮೀ. ಅಂತರದಲ್ಲಿವೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಎರಡು ಸ್ಥಳಗಳನ್ನು ಗುರುತಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಈ ಸಂಬಂಧ ಪ್ರಾಧಿಕಾರಕ್ಕೆ ಪ್ರಸ್ತಾವ ಕಳುಹಿಸಿದ್ದೇವೆ. ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ನಂತರ ಒಪ್ಪಿಗೆ ನೀಡಲಿದ್ದಾರೆ. ಅವರು ಒಪ್ಪಿಗೆ ನೀಡಿದರಷ್ಟೇ ಸಾಲದು. ಆನಂತರ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲಿದ್ದೇವೆ. ಆ ವರದಿಯನ್ನು ಆಧರಿಸಿ ಸ್ಥಳವನ್ನು ಅಂತಿಮಗೊಳಿಸುತ್ತೇವೆ ಎಂದರು.

ಎಂಬಿ ಪಾಟೀಲ್
ಫೆಬ್ರವರಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹೊಸ ದಾಖಲೆ: ಪ್ರಯಾಣಿಕರು, Flight ಗಳ ಸಂಖ್ಯೆಯಲ್ಲಿ ಗರಿಷ್ಠ ಏರಿಕೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com