
ಹಾಸನ: ಹಾಸನದಲ್ಲಿ ಪಾಳು ಬಿದ್ದಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಪಾಳುಬಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಣ್ಣು ಖರೀದಿಗೆ ಬಂದಿದ್ದ ನಜೀರ್ ಹಾಗೂ ಅಮರನಾಥ್ ಮೃತಪಟ್ಟಿದ್ದು ಮತೋರ್ವನ ಗುರುತು ಪತ್ತೆಯಾಗಿಲ್ಲ. ಇನ್ನು ಘಟನೆಯಲ್ಲಿ ಇಬ್ಬರು ಮಹಿಳೆಯರಿಗೆ ಸಹ ಗಂಭೀರಗಳಾಗಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಸತ್ಯನಾರಾಯಣ ಎಂಬುವರಿಗೆ ಸೇರಿದ್ದ ಎಂಟು ಅಂಗಡಿಗಳಿದ್ದ ಹಳೆಯ ಕಟ್ಟಡ ಇದಾಗಿದ್ದು ಇದರಲ್ಲಿ ಅಂಗಡಿಗುತ್ತಿತ್ತು. ಹೀಗಾಗಿ ನಜೀರ್ ಹಾಗೂ ಅಮರನಾಥ್ ಹಣ್ಣು ಖರೀದಿ ಮಾಡಲು ಬಂದಿದ್ದಾರೆ. ಈ ವೇಳೆ ಕಟ್ಟಡದ ಸಬ್ಜಾ ಕುಸಿದುಬಿದ್ದಿದೆ. ಇನ್ನು ಕಟ್ಟಡದ ಅವಶೇಷದಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೇಲೂರು ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
Advertisement