ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ, ವಿಶೇಷ ಪೂಜೆ!

ಸಾಮಾನ್ಯವಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮದುವೆಯಾಗದವರು, ಮಕ್ಕಳಾಗದವರು ಹೆಚ್ಚಾಗಿ ಭೇಟಿ ನೀಡುತ್ತಾರೆ. ದೋಷ ನಿವಾರಣೆಗೆ ಅನೇಕರು ಸರ್ಪ ಸಂಸ್ಕಾರ ಪೂಜೆ ನೆರವೇರಿಸುತ್ತಾರೆ. ಇದೀಗ ಬಾಲಿವುಡ್ ನಟಿ ಕತ್ರಿನಾ ಕೂಡ ಸುಬ್ರಹ್ಮಣ್ಯನ ಮೊರೆ ಹೋಗಿದ್ದಾರೆ
Katrina Kaif
ಕತ್ರಿನಾ ಕೈಫ್
Updated on

ಮಂಗಳೂರು: ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ತನ್ನ ಸ್ನೇಹಿತೆಯರೊಂದಿಗೆ ದೇಗುಲಕ್ಕೆ ಭೇಟಿ ನೀಡಿದ ಕತ್ರಿನಾ, ಸರ್ಪ ಸಂಸ್ಕಾರ ಪೂಜೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಸಾಮಾನ್ಯವಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮದುವೆಯಾಗದವರು, ಮಕ್ಕಳಾಗದವರು ಹೆಚ್ಚಾಗಿ ಭೇಟಿ ನೀಡುತ್ತಾರೆ. ದೋಷ ನಿವಾರಣೆಗೆ ಅನೇಕರು ಸರ್ಪ ಸಂಸ್ಕಾರ ಪೂಜೆ ನೆರವೇರಿಸುತ್ತಾರೆ. ಇದೀಗ ಬಾಲಿವುಡ್ ನಟಿ ಕತ್ರಿನಾ ಕೂಡ ಸುಬ್ರಹ್ಮಣ್ಯನ ಮೊರೆ ಹೋಗಿದ್ದಾರೆ.

ಮಂಗಳವಾರ ಮತ್ತು ಬುಧವಾರದಂದು ತಲಾ ನಾಲ್ಕರಿಂದ ಐದು ಗಂಟೆಗಳ ಕಾಲ ಎರಡು ಹಂತಗಳಲ್ಲಿ ಪೂಜೆಯನ್ನು ನಡೆಸಲಾಗುತ್ತದೆ.

Katrina Kaif
ಮಹಾಕುಂಭ ಮೇಳ: ಪವಿತ್ರ ಸ್ನಾನದ ವೇಳೆ ಕತ್ರಿನಾ ಕೈಫ್ ವಿಡಿಯೋ ರೆಕಾರ್ಡ್; 'ಅಸಹ್ಯಕರ' ಎಂದ ರವೀನಾ ಟಂಡನ್

ದೇವಸ್ಥಾನದ ವಿಐಪಿ ಅತಿಥಿ ಗೃಹದಲ್ಲಿ ಉಳಿದುಕೊಳ್ಳಲಿರುವ ಕತ್ರಿನಾ ಬುಧವಾರ ಮಧ್ಯಾಹ್ನ 2 ಗಂಟೆಯ ವೇಳೆಗೆ ಧಾರ್ಮಿಕ ಕ್ರಿಯೆಯನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com