ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರ ಕೈವಾಡವೂ ಇಲ್ಲ; ಕೇಂದ್ರ ಸರ್ಕಾರದವರು ತನಿಖೆ ಮಾಡಲಿ: ಡಿ.ಕೆ ಶಿವಕುಮಾರ್

ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರೂ ಭಾಗಿಯಾಗಿಲ್ಲ. ಅವರಿಗೂ ಪ್ರಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖಾಧಿಕಾರಿಗಳು ಕೆಲಸ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
Dk Shivakumar
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಬಂಧಿತವಾಗಿರುವ ನಟಿ ರನ್ಯಾ ರಾವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ, ವಿಧಾನಸಭೆಯಲ್ಲೂ ರನ್ಯಾ ರಾವ್ ಪ್ರಕರಣ ಪ್ರತಿಧ್ವನಿಸಿದೆ.

ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರೂ ಭಾಗಿಯಾಗಿಲ್ಲ. ಅವರಿಗೂ ಪ್ರಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖಾಧಿಕಾರಿಗಳು ಕೆಲಸ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಖಾಸಗಿ ಹೊಟೇಲ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ನಟಿ ರನ್ಯಾ ರಾವ್ ಅವರು ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣದಲ್ಲಿ ಸಚಿವರುಗಳ ಹೆಸರು ಕೇಳಿ ಬಂದಿರುವ ಬಗ್ಗೆ ಪ್ರಶ್ನಿಸಿದಾಗ, "ಸಚಿವರಿಗೂ ಇದಕ್ಕೂ ಸಂಬಂಧವಿಲ್ಲ. ಕೇಂದ್ರ ಸರ್ಕಾರದವರು ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ, ಮಾಡಲಿ" ಎಂದರು.

Dk Shivakumar
ರನ್ಯಾ ರಾವ್ ಗೆ ದೈಹಿಕವಾಗಿ ಹಲ್ಲೆ ಮಾಡಲಾಗಿದೆಯೇ? ನ್ಯಾಯಾಲಯದಲ್ಲಿ ಕಣ್ಣೀರಿಟ್ಟ ನಟಿ! ಹೇಳಿದ್ದು ಹೀಗೆ...

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com