ಮೊಬೈಲ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; 18 ಫೋನ್‌, 2 ದ್ವಿಚಕ್ರ ವಾಹನ ವಶ

ಆರೋಪಿಗಳು ಅನೇಕ ದರೋಡೆಗಳನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಮತ್ತು ಕದ್ದ ಫೋನ್‌ಗಳ ಮಾಲೀಕರನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ಮುಂದುವರೆದಿದೆ.
Attika Babu arrested in Bengaluru
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜಗೋಪಾಲನಗರ ಪೊಲೀಸರು ಮೊಬೈಲ್ ಫೋನ್ ದರೋಡೆ ಪ್ರಕರಣವನ್ನು ಭೇದಿಸುವ ಮೂಲಕ ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ. ಬಂಧಿತರಿಂದ 18 ಮೊಬೈಲ್ ಫೋನ್‌ಗಳು ಮತ್ತು 5,00,000 ರೂ. ಮೌಲ್ಯದ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಅನೇಕ ದರೋಡೆಗಳನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಮತ್ತು ಕದ್ದ ಫೋನ್‌ಗಳ ಮಾಲೀಕರನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ಮುಂದುವರೆದಿದೆ.

ಫೆಬ್ರುವರಿ 26 ರಂದು ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಪೇಗೌಡನಗರದ ಆಂಧ್ರಹಳ್ಳಿಯಲ್ಲಿ ವಾಸಿಸುವ ವ್ಯಕ್ತಿಯೊಬ್ಬರು ಮೊಬೈಲ್ ಫೋನ್ ದರೋಡೆ ಆಗಿರುವ ಸಂಬಂಧ ದೂರು ದಾಖಲಿಸಿದ್ದರು.

ರಾಜಗೋಪಾಲನಗರದ 9ನೇ ಕ್ರಾಸ್‌ನಲ್ಲಿರುವ ಕಾರ್ಖಾನೆಯಲ್ಲಿ ಉದ್ಯೋಗಿಯಾಗಿರುವ ದೂರುದಾರರು, ಫೆಬ್ರುವರಿ 26 ರಂದು ರಾತ್ರಿ ರಾಜಗೋಪಾಲನಗರ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಕಪ್ಪು ಬಣ್ಣದ ಪಲ್ಸರ್ ಬೈಕ್‌ನಲ್ಲಿ ಹಿಂದಿನಿಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಅವರ ಬಳಿಗೆ ಬಂದಿದ್ದಾರೆ. ಈ ವೇಳೆ ಹಿಂಬದಿ ಸವಾರ 24,000 ರೂಪಾಯಿ ಮೌಲ್ಯದ ಮೊಬೈಲ್ ಫೋನ್ ಕಸಿದುಕೊಂಡು ಪರಾರಿಯಾಗಿದ್ದರು.

ತನಿಖೆ ನಡೆಸಿದ ಪೊಲೀಸರು, ಮಾರ್ಚ್ 2ರಂದು GKW ಲೇಔಟ್ ಸರ್ಕಲ್ ಬಳಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ನಡೆಸಿದಾಗ, ಶಂಕಿತರು ದರೋಡೆ ಮಾಡಿದ್ದಾಗಿ ಮತ್ತು ದ್ವಿಚಕ್ರ ವಾಹನಗಳನ್ನು ಸಹ ಕದ್ದಿರುವುದಾಗಿ ಒಪ್ಪಿಕೊಂಡಿದ್ದಾರೆ.

Attika Babu arrested in Bengaluru
ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಆಟೋ ಚಾಲಕ ಬಂಧನ: 2.6 ಲಕ್ಷ ಮೌಲ್ಯದ ವಾಹನ, ಮೊಬೈಲ್ ಫೋನ್ ವಶಕ್ಕೆ

ಬಂಧಿತರಿಂದ ಐದು ಲಕ್ಷ ರೂ. ಮೌಲ್ಯದ 18 ಮೊಬೈಲ್ ಫೋನ್‌ಗಳು ಮತ್ತು 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾರ್ಚ್ 3 ರಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪೀಣ್ಯ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಸದಾನಂದ ಎ. ತಿಪ್ಪಣ್ಣನವರ್ ಅವರ ನಿರ್ದೇಶನದಂತೆ ಬೆಂಗಳೂರು ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತ ಸೈದುಲು ಅದಾವತ್ ಐಪಿಎಸ್ ನೇತೃತ್ವದಲ್ಲಿ ಈ ಕಾರ್ಯಾಚರಣೆಯನ್ನು ನಡೆಸಲಾಯಿತು ಮತ್ತು ರಾಜಗೋಪಾಲನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪುನೀತ್ ಬಿಎನ್ ಮತ್ತು ಅವರ ತಂಡವು ಈ ಕಾರ್ಯಾಚರಣೆಯನ್ನು ನಡೆಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com